ದಿವಂಗತ ಐಎಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಕುಸುಮಾ ಭಾನುವಾರ ಕಾಂಗ್ರೆಸ್‌ನ ಸದಸ್ಯತ್ವ ಪಡೆದುಕೊಂಡರು.
ಕೆಪಿಸಿಸಿ ಕಛೇರಿಯಲ್ಲಿ ಕುಸುಮಾ , ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಜಿ. ಪರಮೇಶ್ವರ್ ಸಮ್ಮುಖದಲ್ಲಿ ಕುಸುಮಾ ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ಪಡೆದಿದ್ದಾರೆ. ಕುಸುಮಾ ತಂದೆ ಹನುಮಂತರಾಯಪ್ಪ ಅವರೂ ಸಹ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.
ಕುಸುಮಾ ಭಾನುವಾರ ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆಯಲಿದ್ದಾರೆ. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುಣಾವಣೆಯಲ್ಲಿ ಕುಸುಮಾ ಅವರೇ ಕಾಂಗ್ರೆಸ್ ಅಭ್ಯರ್ಥಿ ಎಂದು ಹೇಳಲಾಗುತ್ತಿತ್ತು. ಆದರೆ ಆರ್‌ಆರ್ ನಗರದ ಅಭ್ಯರ್ಥಿ ಯಾರು ಎಂದು ಇನ್ನೂ ಕಾಂಗ್ರೆಸ್ ಸ್ಪಷ್ಟಪಡಿಸಬೇಕಿದೆ.
ಇದರ ಜೊತೆಗೇ ಶಿರಾದ 60 ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ಇದರಿಂದ ಕಾಂಗ್ರೆಸ್‌ಗೆ ಈಗ ಆನೆ ಬಲ ಬಂದಂತಾಗಿದೆ
More Stories
ಹೊಸ ವರ್ಷದ ಸಂಭ್ರಮ: KSBCLನಿಂದ ಒಂದೇ ದಿನ 308 ಕೋಟಿ ರೂ. ಮದ್ಯ ಮಾರಾಟ
ಮೈಸೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಮಾರ್ಗಸೂಚಿ ಜಾರಿ
ಜ. 2 ರಂದು ರಾಜ್ಯ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಿರ್ಣಯ