ನಮ್ಮ ನಡುವೆ ಆತ್ಮಸಾಕ್ಷಿಯಂತಿದ್ದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಕೋವಿಡ್ ಸೋಂಕು ಗೆದ್ದು ಬಂದಿದ್ದು ಸಂತೋಷವಾಗಿತ್ತು. ದುರಾದೃಷ್ಟವಶಾತ್ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದು ನೋವಿನ ಸಂಗತಿ.
ದೊರೆಸ್ವಾಮಿ ಅವರು ಸ್ವತಃ ಪತ್ರಕರ್ತರಾಗಿ, ಹೋರಾಟಗಾರರಾಗಿ ಸಾರ್ವಜನಿಕ ಬದುಕಿನಲ್ಲಿ ಗಮನಸೆಳೆದ ನಾಡಿನ ಹೆಮ್ಮೆಯ ವ್ಯಕ್ತಿತ್ವ ಅವರದು.
ಒಂದು ಅವಧಿಗೆ ದೊರೆಸ್ವಾಮಿ ಅವರು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಕೂಡ ಅಭಿಮಾನದ ಸಂಗತಿ.
ಸುಧೀರ್ಘ ಅವಧಿ ಸೇವೆ ಸ್ಮರಿಸಿ, ಮೈಸೂರಿನ ಸುತ್ತೂರಿನಲ್ಲಿ ನಡೆದ 34ನೇ ಕೆಯುಡಬ್ಲ್ಯೂಜೆ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಶತಾಯುಷಿಗಳಾದ ಎಚ್.ಎಸ್. ದೊರೆಸ್ವಾಮಿ ಅವರನ್ನು ಅಭಿಮಾನದಿಂದ ಅಭಿನಂದಿಸಲಾಗಿತ್ತು.
ಹಿರಿಯ ಚೇತನ ದೊರೆಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.
- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 89 ಉದ್ಯೋಗಾವಕಾಶ
- ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
- ತಿರುಪತಿ ತಿಮ್ಮಪ್ಪನ ಚಿನ್ನ ಕದಿಯಲು ಹೋಗಿ ಸಿಕ್ಕಿಬಿದ್ದ ಟಿಟಿಡಿ ನೌಕರ
- ಕೆಯುಡಬ್ಲೂೃಜೆ ವಾರ್ಷಿಕ ಪ್ರಶಸ್ತಿಗಳ ಪ್ರಕಟ
More Stories
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ