ನಾಡಿನ ಹೆಸರಾಂತ ಪತ್ರಕರ್ತರಾದ ಟಿಎಸ್ಆರ್ ಮತ್ತು ಮೊಹರೆ ಹಣಮಂತರಾಯ ಹೆಸರಿನಲ್ಲಿ ಹಿರಿಯ ಪತ್ರಕರ್ತರಿಗೆ ವಾರ್ತಾ ಇಲಾಖೆ ನೀಡುವ ಪ್ರಶಸ್ತಿ 3 ವರ್ಷದಿಂದ ಯಾರಿಗೂ ಪ್ರದಾನ ಮಾಡಿಲ್ಲ. ಕೂಡಲೇ ಪ್ರದಾನ ಮಾಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಒತ್ತಾಯಿಸಿದೆ.
ಪತ್ರಿಕೋದ್ಯಮದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡುತ್ತಿದ್ದು, ಪ್ರಶಸ್ತಿಗೆ ಆಯ್ಕೆಯನ್ನು ಮಾಡಲಾಗಿದೆ.
ಆದರೂ ಈ ತನಕ ಪ್ರದಾನ ಮಾಡಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರಿಗೆ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪತ್ರ ಬರೆದು ಗಮನ ಸೆಳೆದಿದ್ದಾರೆ.ಭಾರತಕ್ಕೆ 5 ರನ್‍ಗಳ ರೋಚಕ ಗೆಲುವು – ಭಾರತದ ಸೆಮಿಫೈನಲ್ ನತ್ತ ಹೆಜ್ಜೆ
ಕೂಡಲೇ ದಿನಾಂಕ ನಿಗದಿ ಮಾಡಿ ತಾವು ಪ್ರಶಸ್ತಿಯನ್ನು ಪ್ರದಾನ ಮಾಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು