November 24, 2024

Newsnap Kannada

The World at your finger tips!

ananth kumar

ಮಾಧ್ಯಮಗಳನ್ನು ನಾಯಿಗೆ ಹೋಲಿಸಿದ ಹೆಗಡೆ ಸಾರ್ವಜನಿಕ ಕ್ಷಮೆಗೆ ಕೆಯುಡಬ್ಲ್ಯುಜೆ ಒತ್ತಾಯ

Spread the love

ಬೆಂಗಳೂರು: ಮಾಧ್ಯಮಗಳನ್ನು ನಾಯಿಗಳಿಗೆ ಹೋಲಿಸಿರುವ ಸಂಸದ ಅನಂತಕುಮಾರ ಹೆಗಡೆ ಅವರು ಬೇಷರತ್ತಾಗಿ ಸಾರ್ವಜನಿಕ ಕ್ಷಮೆ ಕೇಳಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ( ಕೆಯುಡಬ್ಲ್ಯುಜೆ ) ಒತ್ತಾಯಿಸಿದೆ.

image 2

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಹಿಲ್ಲೂರು ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ ಆನೆ ಹೋಗಿದ್ದೇ ದಾರಿ ಎಂಬಂತೆ ನಾವು ಇರಬೇಕು. ಮಾಧ್ಯಮಗಳು ಏನು ಬೇಕಾದರೂ ಬರೆದುಕೊಳ್ಳಲಿ. ಆನೆಗಳು ಹೋಗುವಾಗ ನಾಯಿಗಳು ಬೊಗಳುವುದು ಸಹಜ ಎಂದು ಮಾಧ್ಯಮದವರನ್ನು ಹೀಯಾಳಿಸಿರುವುದು ಖಂಡನೀಯ ಎಂದು ಕೆಯುಡಬ್ಲ್ಯುಜೆ, ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೂ ಪತ್ರ ಬರೆದಿದೆ.

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮಾಧ್ಯಮಕ್ಕೆ ತನ್ನದೇ ಆದ ಮಹತ್ವದ ಸ್ಥಾನವಿದೆ. ತಮಗೆ ಬೇಕಾದಾಗ ಮಾಧ್ಯಮವನ್ನು ಹೊಗಳುವುದು ಬೇಡವೆನಿಸಿದಾಗ ತೆಗಳುವುದು ಕೆಲ ರಾಜಕಾರಣಿಗಳಿಗೆ ಪರಿಪಾಠವಾಗಿದೆ. ನಯಾಬ್ ಸಿಂಗ್ ಸೈನಿ ಹರಿಯಾಣ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ಅನಂತ ಕುಮಾರ ಹೆಗಡೆ ಅವರು ಜವಾಬ್ದಾರಿಯುತ ಸಂಸದರಾಗಿದ್ದು, ಆಗಿಂದ್ದಾಗೆ ಮನಸೋ ಇಚ್ಛೆ ಮಾತನಾಡುತ್ತಿರುವುದಲ್ಲದೆ ಮಾಧ್ಯಮವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿರುವುದನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿ ಕ್ರಮ ಜರುಗಿಸಬೇಕು ಮತ್ತು ನಾಲಿಗೆ ಹಿಡಿತವಿಲ್ಲದ ಇಂತವರನ್ನು ಸಾರ್ವಜನಿಕ ಚುನಾವಣೆಗಳಿಂದ ದೂರ ಇಡಬೇಕು ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಒತ್ತಾಯಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!