ಚಿನ್ನಾಭರಣ ಖರೀದಿಗೆ ನಿಮ್ಮ ಗ್ರಾಹಕರನ್ನು ತಿಳಿಯಿರಿ(ಕೆವೈಸಿ) ಸಲ್ಲಿಕೆ ಕಡ್ಡಾಯವಾಗಿತ್ತು. ಆದರೆ ಈಗ 2 ಲಕ್ಷ ರುಗಳ ತನಕ ಚಿನ್ನಾಭರಣ ಖರೀದಿಗೆ ಕೆವೈಸಿ ಬೇಕಿಲ್ಲ ಎಂದು ಹಣಕಾಸು ಸಚಿವಾಲಯ ಹೇಳಿದೆ.
ನಗದು ಮೂಲಕ ಖರೀದಿಸುವ ಚಿನ್ನ, ಬೆಳ್ಳಿ ಮೊದಲಾದ ಬೆಲೆಬಾಳುವ ವಸ್ತುಗಳ ಖರೀದಿಗೆ ಕೆವೈಸಿ ಕಡ್ಡಾಯವಲ್ಲ. ಭಾರಿ ಮೊತ್ತದ ನಗದು ರೂಪದ ವ್ಯವಹಾರಗಳಿಗೆ ಆಧಾರ್ ಮತ್ತು ಪ್ಯಾನ್ ನಂತಹ ದಾಖಲೆಗಳ ಸಲ್ಲಿಕೆ ಕಡ್ಡಾಯವಾಗಿರುತ್ತದೆ.
2020ರ ಡಿಸೆಂಬರ್ 28ರಂದು ಎರಡು ಲಕ್ಷ ರೂಪಾಯಿಗಿಂತ ಹೆಚ್ಚಿನ ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ಖರೀದಿ ಮಾಡುವ ಸಂದರ್ಭದಲ್ಲಿ ಕೆವೈಸಿ ಕಡ್ಡಾಯ ಎಂದು ತಿಳಿಸಲಾಗಿತ್ತು. ಕೇಂದ್ರ ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಿ, 10 ಲಕ್ಷ ರೂಪಾಯಿ ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತದ ನಗದು ರೂಪದಲ್ಲಿ ಚಿನ್ನಾಭರಣ ಖರೀದಿಸುವ ಗ್ರಾಹಕರು ಮಾತ್ರ ಅಗತ್ಯವಾದ ದಾಖಲೆಗಳನ್ನು ಸಲ್ಲಿಸಬೇಕಿದೆ ಎಂದು ಹೇಳಿದೆ
2020ರ ಡಿಸೆಂಬರ್ 20 ರಂದೇ ಅಧಿಸೂಚನೆ ಹೊರಡಿಸಲಾಗಿದೆ. ಎರಡು ಲಕ್ಷ ರೂಪಾಯಿವರೆಗೆ ಚಿನ್ನಾಭರಣ ಖರೀದಿಗೆ ಕೆವೈಸಿ ಬೇಕಿಲ್ಲವೆಂದು ನಿಯಮದ ಕುರಿತು ಸ್ಪಷ್ಟನೆ ನೀಡಲಾಗಿದೆ . 10 ಲಕ್ಷ ರು ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತದ ನಗದು ರೂಪದಲ್ಲಿ ಚಿನ್ನಾಭರಣ ಖರೀದಿಸುವ ಗ್ರಾಹಕರು ಕೆವೈಸಿ ದಾಖಲೆ ನೀಡಬೇಕಿದೆ ಎಂದು ಹೇಳಲಾಗಿದೆ.
- 2025ನೇ ಸಾಲಿನ ರೈಲ್ವೆ ಗ್ರೂಪ್-ಡಿ ಹುದ್ದೆಗಳಿಗೆ 32,000ಕ್ಕೂ ಹೆಚ್ಚು ನೇಮಕಾತಿ
- ವಿಚಾರ ಕ್ರಾಂತಿಯ ಯುಗಪುರುಷ ಕುವೆಂಪು
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
More Stories
2025ನೇ ಸಾಲಿನ ರೈಲ್ವೆ ಗ್ರೂಪ್-ಡಿ ಹುದ್ದೆಗಳಿಗೆ 32,000ಕ್ಕೂ ಹೆಚ್ಚು ನೇಮಕಾತಿ
ವಿಚಾರ ಕ್ರಾಂತಿಯ ಯುಗಪುರುಷ ಕುವೆಂಪು
SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ