ಆಹಾರದ ಕೊರತೆ: ಕಡಿಮೆ ಊಟ ಮಾಡಿ-ಉತ್ತರ ಕೊರಿಯಾ ಜನರಿಗೆ ಸರ್ವಾಧಿಕಾರಿ ಹುಕುಂ

Team Newsnap
1 Min Read

ಕೊರಿಯಾ ದೇಶದಲ್ಲಿ ತೀವ್ರವಾಗಿ ಆಹಾರ ಬಿಕ್ಕಟ್ಟು ಎದುರಾಗಿದೆ. ಹೀಗಾಗಿ ಜನರು 2025ರವರೆಗೆ ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸುವಂತೆ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಮನವಿ ಮಾಡಿದ್ದಾರೆ

2025ರಲ್ಲಿ ಚೀನಾ ಜತೆಗಿನ ಗಡಿಯನ್ನು ಪುನರಾರಂಭಿಸುವವರೆಗೆ ದೇಶದ ಜನರು ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸಬೇಕೆಂದು ಕಿಮ್ ಎಚ್ಚರಿಕೆಯ ಸಂದೇಶವನ್ನು ಹೊರಡಿಸಿದ್ದಾರೆ.

ಉತ್ತರ ಕೊರಿಯಾದ ಜನರಿಗೆ ಈಗಾಗಲೇ ಆಹಾರ ಕೊರತೆ ಎದುರಾಗಿದೆ. ಅದೇ ರೀತಿ ಇನ್ನು ಮೂರು ವರ್ಷಗಳ ಕಾಲ ಜನರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿರುವುದಾಗಿ ವರದಿ ತಿಳಿಸಿದೆ.

ದೇಶದಲ್ಲಿನ ಆಹಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೃಷಿ ಉತ್ಪಾದನೆಯನ್ನು ಹೆಚ್ಚಳ ಮಾಡಲು ಮಾರ್ಗೋಪಾಯ ಕಂಡುಹಿಡಿಯಬೇಕೆಂದು ಕಿಮ್ ಆದೇಶಿಸಿದ್ದಾನೆ.

Share This Article
Leave a comment