ಸಚಿವ ಖಾತೆಗಳನ್ನು ಅದಲು ಬದಲು ಮಾಡುವ ಅಧಿಕಾರ ಮುಖ್ಯಮಂತ್ರಿಗಳಿದೆ, ಅವರು ಅದನ್ನು ಮಾಡಿದ್ದಾರೆ. ಪಕ್ಷದ ವರಿಷ್ಠರ ಜೊತೆಗೆ ಮಾತುಕತೆ ಮಾಡಿಕೊಂಡು ಈ ತೀರ್ಮಾನ ಮಾಡಿದ್ದಾರೆ ಎಂದು ಸಚಿವ ಖಾತೆ ಮರು ಹಂಚಿಕೆ ಮಾಡಿರುವುದನ್ನು ಡಿಸಿಎಂ ಲಕ್ಷ್ಮಣ್ ಸವದಿ ಸಮರ್ಥಿಸಿಕೊಂಡರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸವದಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಯಲ್ಲಿ ಯಾವುದೇ ಹರುಳಿಲ್ಲ, ರಾಜಕೀಯವಾಗಿ ಹೇಳಿಕೆ ನೀಡಿದ್ದಾರೆ. ಇಲಾಖೆ ಬದಲಾದರೆ ಅಸಮರ್ಥರು ಅಂತಾ ಅಲ್ಲ ಎಂದರು.
ಒಳ್ಳೆಯ ಕೆಲಸ ಆಗಬೇಕು ಅಂತಾ ಸಿಎಂ ಕೆಲ ತೀರ್ಮಾನ ಮಾಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆದಾಗ ಎರಡು ವರ್ಷ ಡಿ.ಕೆ ಶಿವಕುಮಾರ್ ಗೆ ಮಂತ್ರಿ ಮಂಡಲಕ್ಕೆ ತೆಗೆದುಕೊಂಡಿರಲಿಲ್ಲ. ಡಿಕೆಶಿ ಅಸಮರ್ಥರು ಅನ್ನುವ ಕಾರಣಕ್ಕೆ ಬಿಟ್ಟಿದ್ದರು ಅನ್ನುವುದನ್ನು ಹೇಳಲಿ. ಕೆಲವು ಸನ್ನಿವೇಶದಲ್ಲಿ, ಸಂದರ್ಭದಲ್ಲಿ ಕೆಲವೊಂದು ಬದಲಾವಣೆ ಆಗುತ್ತವೆ ಎಂದು ತಿರುಗೇಟು ನೀಡಿದರು.
ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ತುಮಕೂರಿನ ಶಿರಾ ಉಪ ಚುನಾವಣೆ ವಿಚಾರವಾಗಿ ಮಾತನಾಡಿದ ಡಿಸಿಎಂ ಸವದಿ, ಎರಡು ಕ್ಷೇತ್ರದಲ್ಲಿ ಗೆಲ್ಲುವಂತಹ ಅವಕಾಶ ನಮಗೆ ಜಾಸ್ತಿ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
More Stories
ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ