December 23, 2024

Newsnap Kannada

The World at your finger tips!

lakshman

ರಾಜೀನಾಮೆಗೆ ಲಕ್ಷ್ಮಣ ಸವದಿ ನಿರ್ಧಾರ

Spread the love

ಬೆಂಗಳೂರು: ವಿಧಾನಸಭೆ ಚುನಾವಣೆಗೆ 189 ಅಭ್ಯರ್ಥಿಗಳ ಬಿಜೆಪಿ ಮೊದಲ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಪಕ್ಷದಲ್ಲಿ ಬಂಡಾಯದ ಬಿಸಿ ಜೋರಾಗಿದೆ.

ಬೆಳಗಾವಿಯ ಅಥಣಿ ಕ್ಷೇತ್ರದ ಟಿಕೆಟ್ ತಪ್ಪಿರುವುದರಿಂದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಹಾಲಿ ಶಾಸಕ ಮಹೇಶ ಕುಮಠಳ್ಳಿ ಅವರಿಗೆ ಟಿಕೆಟ್ ನೀಡಲಾಗಿದೆ. ಸವದಿ ಅವರು ಅಥಣಿಯಿಂದ ಮೂರು ಬಾರಿ ಶಾಸಕರಾಗಿದ್ದರು. ಆದರೆ 2018ರ ಚುನಾವಣೆಯಲ್ಲಿ ಆಗ ಕಾಂಗ್ರೆಸ್‍ನಲ್ಲಿದ್ದ ಮಹೇಶ್ ಕುಮಠಳ್ಳಿ ವಿರುದ್ಧ ಸೋತಿದ್ದರು.

ಅಥಣಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಕ್ಷ್ಮಣ್ ಸವದಿ, ಬಿಜೆಪಿಗೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದೇನೆ. ನನ್ನ ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳ ಬಳಿ ಚರ್ಚಿಸಿ ನಾಳೆ ಸಂಜೆ ದೃಢ ನಿರ್ಧಾರ ತೆಗೆದುಕೊಂಡು ಮುಂದಿನ ನಡೆಯನ್ನು ಶುಕ್ರವಾರದೊಳಗೆ ನಿಶ್ಚಯಿಸುತ್ತೇನೆ ಎಂದಿದ್ದಾರೆ.
2019ರಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕಾಂಗ್ರೆಸ್- ಜೆಡಿ(ಎಸ್) ಸಮ್ಮಿಶ್ರ ಸರ್ಕಾರವನ್ನು ಉರುಳಿಸಿ ಬಿಜೆಪಿ ಸರ್ಕಾರವನ್ನು ರಚಿಸಲು ಬಿಜೆಪಿಗೆ ಸಹಾಯ ಮಾಡಿದ್ದ ಪಕ್ಷಾಂತರಿಗಳ ಗುಂಪಿನಲ್ಲಿ ಮಹೇಶ್ ಕುಮಟಳ್ಳಿ ಸೇರಿದ್ದಾರೆ.

ಬೆಳಗಾವಿಯ ಎಲ್ಲ 18 ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಹಂಚಿಕೆ ಮಾಡಿದೆ. ಇದರಲ್ಲಿ  ಬಿ.ಎಸ್.ಯಡಿಯೂರಪ್ಪ ಅವರ ಅತ್ಯಾಪ್ತ ಡಾ. ವಿಶ್ವನಾಥ ಪಾಟೀಲ್ ಅವರಿಗೆ ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ದೇಶದಲ್ಲಿ ಕೋವಿಡ್ ಏರಿಕೆ : 7,830 ಸೋಂಕು ಪತ್ತೆ- 40 ಸಾವಿರ ಸಕ್ರಿಯ ಪ್ರಕರಣಗಳು

ಲಕ್ಷ್ಮಣ ಸವದಿ ಅವರಿಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲ ಸವದಿ ನಿವಾಸಕ್ಕೆ ಕಾಗವಾಡ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಭೇಟಿ ನೀಡಿದ್ದರು. ಕಾಂಗ್ರೆಸ್ ಆಪ್ತ ಸ್ನೇಹಿತನ ಮೂಲಕ ಲಕ್ಷ್ಮಣ್ ಸವದಿ ಅವರನ್ನು ಕಾಂಗ್ರೆಸ್‍ಗೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.

Copyright © All rights reserved Newsnap | Newsever by AF themes.
error: Content is protected !!