ವ್ಯಕ್ತಿಯೊಬ್ಬರ ಜಮೀನು ಭೂಸ್ವಾಧೀನಗೊಂಡಿಲ್ಲ ಎಂದು ಎನ್ ಒ ಸಿ ಪತ್ರ ನೀಡಲು 2.5 ಲಕ್ಷ ರು ಹಣ ಲಂಚ ಪಡೆದು, ಈ ಬಗ್ಗೆ ದೂರು ದಾಖಲಾದ ಬಳಿಕ ಲಂಚದ ಹಣವನ್ನು ಮರಳಿಸುತ್ತಿದ್ದ ವೇಳೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವಿಶೇಷ ಭೂಸ್ವಾಧೀನಾಧಿಕಾರಿ ಮತ್ತು ಭೂಮಾಪಕರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.ಇದನ್ನು ಓದಿ-PayCM ಪೋಸ್ಟರ್ ಕೇಸ್-ಕೆಪಿಸಿಸಿ ಸಾಮಾಜಿಕ ಜಾಲತಾಣದ ಇಬ್ಬರ ಬಂಧನ
ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ–2 ಹುದ್ದೆಯಲ್ಲಿದ್ದ ಕೆಎಎಸ್ ಅಧಿಕಾರಿ ಎ.ಬಿ. ವಿಜಯಕುಮಾರ್ ಮತ್ತು ಅವರ ಕಚೇರಿಯ ಭೂಮಾಪಕ ರಘುನಾಥ್ ಬಂಧಿತರು.
ಮೊದಲ ಆರೋಪಿ ಎಬಿ ವಿಜಯಕುಮಾರ್, ವಿಶೇಷ ಭೂಸ್ವಾಧೀನ ಅಧಿಕಾರಿ ಮತ್ತು ಎರಡನೇ ಆರೋಪಿ ರಘುನಾಥ್, ಭೂಮಾಪಕ. ದೂರುದಾರ ಭಗತ್ ಸಿಂಗ್ ಅರುಣ್ ಅವರಿಗೆ ಎನ್‌ಒಸಿ ನೀಡಲು ಅಧಿಕಾರಿಗಳು 2.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಂತರ 2.50 ಲಕ್ಷ ಲಂಚ ಪಡೆದು ಎನ್‌ಒಸಿ ನೀಡಿದ್ದರು.
ಲಂಚ ನೀಡಿದ ಅರ್ಜಿದಾರರು ಕೆಐಎಡಿಬಿ ಉಪ ಆಯುಕ್ತರಿಗೆ ದೂರು ನೀಡಿದ್ದರು. ಹಿರಿಯ ಅಧಿಕಾರಿಗಳು ತನಿಖೆ ಆರಂಭಿಸುತ್ತಿದ್ದಂತೆ ದೂರುದಾರರನ್ನು ಸಂಪರ್ಕಿಸಿದ್ದ ಆರೋಪಿಗಳು, ದೂರನ್ನು ಹಿಂಪಡೆದರೆ 2.5 ಲಕ್ಷದೊಂದಿಗೆ 50,000 ರು. ಸೇರಿಸಿ ವಾಪಸ್ ನೀಡುವುದಾಗಿ ಆಮಿಷ ಒಡ್ಡಿದ್ದರು. ದೂರುದಾರರಿಗೆ ಹಣ ವಾಪಸ್ ನೀಡುತ್ತಿದ್ದಾಗ ಇಬ್ಬರನ್ನೂ ಬಂಧಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು