ತಿರುವನಂತಪುರಂ: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿಯಲ್ಲಿ ಗುಡ್ಡ ಕುಸಿದಿದೆ. ಈ ದುರಂತದಲ್ಲಿ 24 ಮಂದಿ ಸಾವನ್ನಪ್ಪಿ ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ನಸುಕಿನ ಜಾವ 2 ಗಂಟೆಗೆ ಮೊದಲ ಭೂಕುಸಿತ ಸಂಭವಿಸಿದರೆ ಮುಂಜಾನೆ 4:10ರ ವೇಳೆ ಎರಡನೇ ಬಾರಿ ಸಂಭವಿಸಿದೆ.
ಜಲಸ್ಫೋಟದಿಂದಾಗಿ ಗುಡ್ಡದಿಂದ ನೀರು ರಭಸವಾಗಿ ಮನೆಗಳ ಮೇಲೆ ಹರಿದು ಹೋಗಿದ್ದರಿಂದ ಸಾವು ನೋವಿನ ಪ್ರಮಾಣ ಹೆಚ್ಚಾಗಿದೆ.
ವಯನಾಡು ಜಿಲ್ಲೆಯಲ್ಲಿ ಭೂಕುಸಿತದ ನಂತರ ರಕ್ಷಣಾ ಕಾರ್ಯಾಚರಣೆಗಾಗಿ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಕಾರ್ಯ ನಿರ್ವಹಿಸುತ್ತಿವೆ.
ಅಲ್ಲಿನ ಜನರಿಗೆ ಸಹಾಯ ಮಾಡಲು ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ. ಮೆಪ್ಪಾಡಿ, ಮುಂಡಕ್ಕೈ ಟೌನ್ ಮತ್ತು ಚುರಲ್ ಮಾಲಾದಲ್ಲಿ ಇಂದು ಮುಂಜಾನೆ ಅನಾಹುತ ಆಗಿದೆ. ಭೂಕುಸಿತದಿಂದ ಮಕ್ಕಳೂ ಸೇರಿ 24 ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಭೂಕುಸಿತದಲ್ಲಿ ಗಾಯಗೊಂಡ 50 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಡಕ್ಕೈ ಟೌನ್‌ನಲ್ಲಿ ರಾತ್ರಿ 1 ಗಂಟೆ ಸುಮಾರಿಗೆ ಭಾರೀ ಮಳೆಯ ಸಂದರ್ಭದಲ್ಲಿ ಮೊದಲ ಭೂಕುಸಿತ ಸಂಭವಿಸಿದೆ. ಮುಂಡಕ್ಕೈನಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಮುಂಜಾನೆ 4 ಗಂಟೆ ಸುಮಾರಿಗೆ ಚುರಲ್ ಮಾಳದ ಶಾಲೆಯೊಂದರ ಬಳಿ ಎರಡನೇ ಭೂಕುಸಿತ ಸಂಭವಿಸಿದೆ. ಶಾಲೆಯ ಸುತ್ತಮುತ್ತಲಿನ ಮನೆಗಳು, ಅಂಗಡಿಗಳು ಗುಡ್ಡ ಕುಸಿತದಿಂದ ನಾಶ ಆಗಿವೆ.
ತುರ್ತು ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ 9656938689 ಮತ್ತು 8086010833 ನೀಡಲಾಗಿದೆ.
ಜೊತೆಗೆ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಎಂಐ -17 ಮತ್ತು ಒಂದು ಎಎಲ್‌ಹೆಚ್, ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ