Main News

ಕೇರಳದಲ್ಲಿ ಭೂ ಕುಸಿತ – ಜಲ ಪ್ರಳಯದಿಂದ 24 ಮಂದಿ ಸಾವು

ತಿರುವನಂತಪುರಂ: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿಯಲ್ಲಿ ಗುಡ್ಡ ಕುಸಿದಿದೆ. ಈ ದುರಂತದಲ್ಲಿ 24 ಮಂದಿ ಸಾವನ್ನಪ್ಪಿ ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ನಸುಕಿನ ಜಾವ 2 ಗಂಟೆಗೆ ಮೊದಲ ಭೂಕುಸಿತ ಸಂಭವಿಸಿದರೆ ಮುಂಜಾನೆ 4:10ರ ವೇಳೆ ಎರಡನೇ ಬಾರಿ ಸಂಭವಿಸಿದೆ.

ಜಲಸ್ಫೋಟದಿಂದಾಗಿ ಗುಡ್ಡದಿಂದ ನೀರು ರಭಸವಾಗಿ ಮನೆಗಳ ಮೇಲೆ ಹರಿದು ಹೋಗಿದ್ದರಿಂದ ಸಾವು ನೋವಿನ ಪ್ರಮಾಣ ಹೆಚ್ಚಾಗಿದೆ.

ವಯನಾಡು ಜಿಲ್ಲೆಯಲ್ಲಿ ಭೂಕುಸಿತದ ನಂತರ ರಕ್ಷಣಾ ಕಾರ್ಯಾಚರಣೆಗಾಗಿ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಕಾರ್ಯ ನಿರ್ವಹಿಸುತ್ತಿವೆ.

ಅಲ್ಲಿನ ಜನರಿಗೆ ಸಹಾಯ ಮಾಡಲು ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ. ಮೆಪ್ಪಾಡಿ, ಮುಂಡಕ್ಕೈ ಟೌನ್ ಮತ್ತು ಚುರಲ್ ಮಾಲಾದಲ್ಲಿ ಇಂದು ಮುಂಜಾನೆ ಅನಾಹುತ ಆಗಿದೆ. ಭೂಕುಸಿತದಿಂದ ಮಕ್ಕಳೂ ಸೇರಿ 24 ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಭೂಕುಸಿತದಲ್ಲಿ ಗಾಯಗೊಂಡ 50 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಡಕ್ಕೈ ಟೌನ್‌ನಲ್ಲಿ ರಾತ್ರಿ 1 ಗಂಟೆ ಸುಮಾರಿಗೆ ಭಾರೀ ಮಳೆಯ ಸಂದರ್ಭದಲ್ಲಿ ಮೊದಲ ಭೂಕುಸಿತ ಸಂಭವಿಸಿದೆ. ಮುಂಡಕ್ಕೈನಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಮುಂಜಾನೆ 4 ಗಂಟೆ ಸುಮಾರಿಗೆ ಚುರಲ್ ಮಾಳದ ಶಾಲೆಯೊಂದರ ಬಳಿ ಎರಡನೇ ಭೂಕುಸಿತ ಸಂಭವಿಸಿದೆ. ಶಾಲೆಯ ಸುತ್ತಮುತ್ತಲಿನ ಮನೆಗಳು, ಅಂಗಡಿಗಳು ಗುಡ್ಡ ಕುಸಿತದಿಂದ ನಾಶ ಆಗಿವೆ.
ತುರ್ತು ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ 9656938689 ಮತ್ತು 8086010833 ನೀಡಲಾಗಿದೆ.

ಜೊತೆಗೆ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಎಂಐ -17 ಮತ್ತು ಒಂದು ಎಎಲ್‌ಹೆಚ್, ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

Team Newsnap
Leave a Comment

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024