ನಿಂತಿದ್ದ ಕ್ಯಾಂಟರ್ ಗೆ ಹಿಂದಿನಿಂದ ಲಾರಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

Team Newsnap
0 Min Read

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕ್ಯಾಂಟರ್​​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಹಿರಿಯೂರು ತಾಲೂಕಿನ ಮೇಟಿಕುರ್ಕೆ ಬಳಿ ಇಂದು ಸಂಭವಿಸಿದೆ.

ಈ ಘಟನೆಯಲ್ಲಿ ಕುಮಾರ(24), ವಿಜಯ್(28) ಮೃತಪಟ್ಟವರು.
ಗಾಯಗೊಂಡ ಇಬ್ಬರನ್ನು ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ

ಬೆಳಗಿನ ಜಾವ ಕ್ಯಾಂಟರ್ ನಿಲ್ಲಿಸಿ ಟೀ ಕುಡಿಯುತ್ತಿದ್ದ ವೇಳೆ ದಾವಣಗೆರೆ ಕಡೆಯಿಂದ ಬೆಂಗಳೂರಿಗೆ ಹೊರಟಿದ್ದ ಲಾರಿ, ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಲಾರಿ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment