December 22, 2024

Newsnap Kannada

The World at your finger tips!

ugra 1

ಬೆಂಗಳೂರಿನಲ್ಲಿ ಲಷ್ಕರ್ ಉಗ್ರನ ಬಂಧನ – ಫುಡ್ ಡೆಲವರಿ ಬಾಯ್ ಆಗಿದ್ದ ಉಗ್ರ

Spread the love

ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಅಸ್ಸಾಂ ಮೂಲದ ಶಂಕಿತ ಉಗ್ರನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಲಷ್ಕರ್ ಸಂಘಟನೆಯ ಅಸ್ಸಾಂ ಮೂಲದ ಅಖ್ತರ್ ಹುಸೇನ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಶಂಕಿತ ಉಗ್ರ ವಾಸವಿದ್ದ ಮನೆ ಮೇಲೆ ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆಯಲಾಗಿದೆ.ಭಾರತದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸಿದ್ದು ನಟ ಅಕ್ಷಯ್ ಕುಮಾರ್ : ತೆರಿಗೆ ಇಲಾಖೆ ಪ್ರಶಂಸನಾ ಪತ್ರ

ತಿಲಕ್ ನಗರದ ಬಿಟಿಪಿ ಏರಿಯಾದ ಕಟ್ಟಡದ ಮೂರನೇ ಮಹಡಿ ಕೋಣೆಯಲ್ಲಿ ಶಂಕಿತ ವಾಸವಿದ್ದ ಈ ಉಗ್ರ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಕೆಲ ಯುವಕರೊಂದಿಗೆ ಅಖ್ತರ್ ಹುಸೇನ್ ವಾಸ್ತವ್ಯ ಮಾಡಿದ್ದನಂತೆ.

ಬೆಂಗಳೂರಿನಲ್ಲಿ ಶಂಕಿತ ಉಗ್ರ‌ ತಲೆಮರೆಸಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ 30ಕ್ಕೂ ಹೆಚ್ಚು ಸಿಸಿಬಿ ಪೊಲೀಸ್ ತಂಡ ಕಾರ್ಯಚರಣೆ ನಡೆಸಿ ದಾಳಿ ಮಾಡಿತ್ತು. ಘಟನೆ ಸಂಬಂಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲು ಮಾಡಲಾಗಿದೆ.

Copyright © All rights reserved Newsnap | Newsever by AF themes.
error: Content is protected !!