ಭಾರತದ ಕೋಗಿಲೆ, ಭಾರತ ರತ್ನ ಲತಾ ಮಂಗೇಶ್ಕರ್ ಅಸ್ತಂಗತ

Team Newsnap
2 Min Read

ಭಾರತ ರತ್ನ ಪುರಸ್ಕೃತ ಬಹು ಭಾಷಾ ಗಾಯಕಿ, ಭಾರತದ ಕೋಗಿಲೆ ಲತಾ ಮಂಗೇಶ್ಕರ್ ಮುಂಬೈ ನಲ್ಲಿ ಇಂದು ನಿಧನರಾದರು.

92 ವರ್ಷದ ಲತಾಜೀ ಶಾಸ್ತ್ರೀಯ ಸಂಗೀತ ಮತ್ತು ರಂಗ-ನಟ ಪಂಡಿತ್ ದೀನಾನಾಥ್ ಮಂಗೇಶ್ಕರ್ ಅವರ ಪುತ್ರಿ, ಲತಾ ಮಧ್ಯಪ್ರದೇಶದ ಇಂದೋರಿನಲ್ಲಿ 1929 ಸೆಪ್ಟಂಬರ್ 28 ರಂದು ಜನಿಸಿದರು.

ದೀನಾನಾಥ್ ಮನೆಯಲ್ಲಿ ಕೆಲವು ಮಕ್ಕಳಿಗೆ ಸಂಗೀತ ಪಾಠ ಹೇಳುತ್ತಿದ್ದರು. ಒಂದು ದಿನ ಒಬ್ಬ ಹುಡುಗ ಸಂಗೀತಾಭ್ಯಾಸ ಮಾಡುವಾಗ ತಪ್ಪುತ್ತಿದ್ದುದನ್ನು ಎಳೆಯ ವಯಸ್ಸಿನ ಲತಾ ತಿದ್ದುವುದನ್ನು ಗಮನಿಸಿದ ದೀನಾನಾಥ್ ಮಗಳಲ್ಲಿ ಸಂಗೀತದ ಪ್ರತಿಭೆ ಇರುವುದನ್ನು ಮನಗಂಡರು. ಮರುದಿನದಿಂದಲೇ ಅವರು ಮಗಳಿಗೆ ಮನೆಯಲ್ಲಿ ಸಂಗೀತಪಾಠ ಪ್ರಾರಂಭಿಸಿದರು.

ತಂದೆಯೇ ಅವರ ಪ್ರಥಮ ಗುರು. ನಂತರ ‘ರಾಮಕೃಷ್ಣ ಬುವಾವಚೆ’ ಮತ್ತು ‘ಉಸ್ತಾದ್ ಅಮಾನತ್ ಖಾನ್’ ಅವರ ಬಳಿ ಸಂಗೀತ ಶಿಕ್ಷಣ ಪಡೆದರು.

ಶಾಸ್ತ್ರೀಯ ಸಂಗೀತ ಗಾಯಕಿಯಾಗುವ ಹಂಬಲವಿತ್ತು. ಆದರೆ ತಂದೆ 41 ನೇ ವರ್ಷದಲ್ಲೇ ತೀರಿಕೊಂಡಾಗ 13 ವರ್ಷದ ಬಾಲಕಿ ಲತಾ ಹೆಗಲ ಮೇಲೆ ಮನೆಯ ಜವಾಬ್ದಾರಿ ಬಿತ್ತು. ತಾಯಿ, 4 ಜನ ತಂಗಿಯರು, ಒಬ್ಬ ತಮ್ಮ, ಇವರುಗಳ ದೊಡ್ಡ ಪರಿವಾರವನ್ನು ನೋಡಿಕೊಳ್ಳಬೇಕಾಗಿ ಬಂತು.

1947 ರಲ್ಲಿ ಹಿಂದಿ ಚಿತ್ರದಲ್ಲಿ ಹಿನ್ನೆಲೆ ಗಾಯಕಿಯಾಗಿ ಹಾಡುವ ಅವಕಾಶ ಸಿಕ್ಕಿತು. ‘ಆಪ್ ಕಿ ಸೇವಾಮೆ’, ‘ಪಾಂ ಲಾಗೂ ಕರ್ ಚೋರಿರೇ’ ಎಂಬ ಹಾಡುಗಳನ್ನು ಹಾಡಿದರು. ‘ಹುಸ್ನ್ ಲಾಲ್ ಭಗತ್ ರಾಮ್’ ಆಕೆಯ ಕಂಠಶ್ರೀಯನ್ನು ಕೇಳಿ ಮೆಚ್ಚಿ ಅವಕಾಶಗಳನ್ನು ಕೊಟ್ಟರು.

ಇಂದೋರ್ ನಿಂದ ಲತಾ ಪುಣೆ ಗೆ ಬಂದರು. ಕೊಲ್ಲಾಪುರ ದಲ್ಲಿ ಸ್ವಲ್ಪ ದಿನವಿದ್ದು, 1947 ರಲ್ಲಿ ಪರಿವಾರದೊಡನೆ ಮುಂಬಯಿ ನ ನಾನಾ ಚೌಕ್ ನಲ್ಲಿ ಬಂದಿಳಿದರು. ‘ಆನಂದ್ ಧನ್’ ಎಂಬ ಹೆಸರಿನಿಂದ ಮರಾಠಿಚಿತ್ರಗಳ ಸಂಗೀತನಿರ್ದೇಶನ ಮಾಡುತ್ತಿದ್ದರು.

ಪ್ರಶಸ್ತಿಗಳು :

  • 6 ವಿಶ್ವವಿದ್ಯಾಲಯಗಳ ಗೌರವ ಡಾಕ್ಟೊರೇಟ್ (ನ್ಯೂಯಾರ್ಕ್ ವಿಶ್ವವಿದ್ಯಾಲಯವೂ ಸೇರಿದಂತೆ).
  • ಅನೇಕ ಫಿಲ್ಮ್ ಫೇರ್ ಪ್ರಶಸ್ತಿಗಳು
  • ಶಾಂತಿನಿಕೇತನದಿಂದ ದೇಶಿಕೋತ್ತಮ ಪ್ರಶಸ್ತಿ
  • ಆಸ್ಥಾನ ವಿದ್ವಾನ್, ತಿರುಪತಿ ದೇವಸ್ಥಾನಮ್
  • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
  • ಪದ್ಮಭೂಷಣ
  • ಭಾರತರತ್ನ
  • ಫ್ರಾನ್ಸ್ ಸರ್ಕಾರ ನೀಡುವ ’ಆಫೀಸರ್ ಆಫ್ ದ ಲೀಜಿಯನ್ ಆಫ್ ಆನರ್’ ಪ್ರತಿಷ್ಠಿತ ಪ್ರಶಸ್ತಿ
Share This Article
Leave a comment