ಕಳೆದ ತಡ ರಾತ್ರಿಯ ನಂತರ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಐವರು ಮಕ್ಕಳೂ ಸೇರಿ 9 ಮಂದಿ ಧಾರುಣ ಘಟನೆ ಹಾಸನದ ಅರಸೀಕೆರೆ ಬಳಿಯ ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದಲ್ಲಿ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಕೆಎಸ್ಆರ್ಟಿ ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಲಾರಿ ಬಸ್ ಮಧ್ಯೆ ಸಿಲುಕಿ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.
ಈ ದುರಂತದಲ್ಲಿ ಟೆಂಪೋ ಟ್ರಾವೆಲರ್ನಲ್ಲಿದ್ದ 5 ಮಕ್ಕಳು ಸೇರಿದಂತೆ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಟಿಟಿ ಯಲ್ಲಿ 14 ಮಂದಿ ಧರ್ಮಸ್ಥಳಕ್ಕೆ ತೆರಳಿದ್ದರು. ಅಲ್ಲಿಂದ ವಾಪಸ್ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಗಾಯಗೊಂಡಿರುವವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಬಾಣಾವರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ .
More Stories
ರಾಜ್ಯ ವಿಧಾನಪರಿಷತ್ 3 ಸ್ಥಾನಗಳಿಗೆ ಜೂ.30ರಂದು ಉಪ ಚುನಾವಣೆ ಪ್ರಕಟ
ಹೇಮಂತ್ ನಿಂಬಾಳ್ಕರ್ ವಾರ್ತಾ ಇಲಾಖೆ ಕಮೀಷನರ್ ನೇಮಕ
ರಾಜ್ಯ ಸರ್ಕಾರದಿಂದ 11 ಐಎಎಸ್ ಅಧಿಕಾರಿ’ಗಳ ವರ್ಗಾವಣೆ