ದುಷ್ಕರ್ಮಿಗಳ ಮಾರಕಾಸ್ತ್ರಗಳ ದಾಳಿಗೆ ಬಲಿಯಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮೃತದೇಹ ಹುಟ್ಟೂರು ತಲುಪಿದೆ.
ಬಿಜೆಪಿ, ಭಜರಂಗದಳ, ಆರ್ಎಸ್ಎಸ್ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಪ್ರವೀಣ್ ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಈ ನಡುವೆ ಪ್ರವೀಣ್ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿ, ಭಜರಂಗದಳ, ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಪೊಲೀಸ್ ಲಾಠಿ ಪ್ರಹಾರ ನಡೆಸಿದರು.
ಕರಾವಳಿಯಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಕಟ್ಟೆಚ್ಚರ ವಹಿಸುವ ಪೊಲೀಸರು ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ಅಲ್ಲದೇ ನೆಟ್ಟಾರು ಗ್ರಾಮದಲ್ಲಿ ಜನ ಗುಂಪು ಸೇರಿದರೆ ಪೊಲೀಸರು ಚದುರಿಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಉದ್ವಿಘ್ನಗೊಂಡಿದೆ. ಅದರಲ್ಲೂ ಪುತ್ತೂರು ವಿಭಾಗದಲ್ಲಿ 144 ಸೆಕ್ಷನ್ ಜಾರಿಗೊಳಿಸಿದ್ದಾರೆ.
ಅಂತಿಮ ದರ್ಶನ ಪಡೆಯಲು ಬಿಜೆಪಿ ಪ್ರಮುಖ ನಾಯಕರು ಇಲ್ಲಿಗೆ ಬಂದಿದ್ದರು. ಈ ವೇಳೆ ಬಿಜೆಪಿ ಹಾಗೂ ಭಜರಂಗದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೇ ಸಚಿವ ಸುನಿಲ್ ಕುಮಾರ್, ಶಾಸಕರಾದ ಹರೀಶ್ ಪೂಂಜಾ, ರಘುಪತಿ ಭಟ್ಗೆ ಮುತ್ತಿಗೆ ಹಾಕಿ ಧಿಕ್ಕಾರ ಕೂಗಿದರು.
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
- ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ