ಕರಾವಳಿಯಲ್ಲಿ ಪರಿಸ್ಥಿತಿ ಉದ್ವಿಗ್ನ : ಹಿಂದೂ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್

Team Newsnap
1 Min Read

ದುಷ್ಕರ್ಮಿಗಳ ಮಾರಕಾಸ್ತ್ರಗಳ ದಾಳಿಗೆ ಬಲಿಯಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮೃತದೇಹ ಹುಟ್ಟೂರು ತಲುಪಿದೆ.

ಬಿಜೆಪಿ, ಭಜರಂಗದಳ, ಆರ್​​ಎಸ್​ಎಸ್​ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಪ್ರವೀಣ್ ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಈ ನಡುವೆ ಪ್ರವೀಣ್​ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿ, ಭಜರಂಗದಳ, ಆರ್​​ಎಸ್​ಎಸ್​​ ಕಾರ್ಯಕರ್ತರ ಮೇಲೆ ಪೊಲೀಸ್​​ ಲಾಠಿ ಪ್ರಹಾರ ನಡೆಸಿದರು.

ಕರಾವಳಿಯಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಕಟ್ಟೆಚ್ಚರ ವಹಿಸುವ ಪೊಲೀಸರು ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಲಾಠಿ ಚಾರ್ಜ್​​ ಮಾಡಿದ್ದಾರೆ. ಅಲ್ಲದೇ ನೆಟ್ಟಾರು ಗ್ರಾಮದಲ್ಲಿ ಜನ ಗುಂಪು ಸೇರಿದರೆ ಪೊಲೀಸರು ಚದುರಿಸುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಉದ್ವಿಘ್ನಗೊಂಡಿದೆ. ಅದರಲ್ಲೂ ಪುತ್ತೂರು ವಿಭಾಗದಲ್ಲಿ 144 ಸೆಕ್ಷನ್​​​​ ಜಾರಿಗೊಳಿಸಿದ್ದಾರೆ.

ಅಂತಿಮ ದರ್ಶನ ಪಡೆಯಲು ಬಿಜೆಪಿ ಪ್ರಮುಖ ನಾಯಕರು ಇಲ್ಲಿಗೆ ಬಂದಿದ್ದರು. ಈ ವೇಳೆ ಬಿಜೆಪಿ ಹಾಗೂ ಭಜರಂಗದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೇ ಸಚಿವ ಸುನಿಲ್ ಕುಮಾರ್, ಶಾಸಕರಾದ ಹರೀಶ್ ಪೂಂಜಾ, ರಘುಪತಿ ಭಟ್​ಗೆ ಮುತ್ತಿಗೆ ಹಾಕಿ ಧಿಕ್ಕಾರ ಕೂಗಿದರು.

Share This Article
Leave a comment