ಭಾರತದ ಭೂ ವೀಕ್ಷಣಾ ಉಪಗ್ರಹ ಇಒಎಸ್-01 ಹಾಗೂ ವಿದೇಶದ 9 ಉಪಗ್ರಹಗಳನ್ನು ಒಳಗೊಂಡ ಪಿಎಸ್ಎಲ್ವಿ-ಸಿ 49 ರಾಕೆಟ್ ಶನಿವಾರ ಉಡಾವಣೆ ಆಗಲಿದೆ.
ಮಧ್ಯಾಹ್ನ 3 ಗಂಟೆಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಆಗಲಿದೆ. ಭಾರತದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ ತನ್ನ 51 ನೇ ಮಿಷನ್ನಲ್ಲಿ ಇಒಎಸ್ -01 ಅನ್ನು ಪ್ರಾಥಮಿಕ ಉಪಗ್ರಹವಾಗಿ ಒಂಭತ್ತು ಅಂತರರಾಷ್ಟ್ರೀಯ ಗ್ರಾಹಕ ಉಪಗ್ರಹಗಳೊಂದಿಗೆ ಸಾಗಿಸಲಿದೆ.
EOS-01 ಭೂಮಿಯ ಸುತ್ತ ಸುತ್ತುವ ಉಪಗ್ರಹವಾಗಿದೆ. ಇದು ಕೃಷಿ, ಅರಣ್ಯ ಮತ್ತು ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಸಹಾಯಕಾರಿಯಾಗಲಿದೆ. ಇನ್ನು ಅಂತಾರಾಷ್ಟ್ರೀಯ ಸ್ಯಾಟಲೈಟ್ಗಳನ್ನು ವಾಣಿಜ್ಯ ಒಪ್ಪಂದದ ಮೇರೆ ಉಡಾಯಿಸಲು ಇಸ್ರೋ ಮುಂದಾಗಿದೆ.
ಶ್ರೀಹರಿಕೋಟಾದ ಸತೀಶ್ ಧವನ್ ಸ್ಪೇಸ್ ಸೆಂಟರ್ನಲ್ಲಿ ಈ ಸ್ಯಾಟಲೈಟ್ಗಳನ್ನು ಉಡಾಯಿಸಲು ಮುಂದಾಗಿದ್ದು ಉಡಾವಣೆಯ ದೃಶ್ಯವನ್ನ ಇಸ್ರೋದ ವೆಬ್ಸೈಟ್, ಯೂಟ್ಯೂಬ್, ಫೇಸ್ಬುಕ್ ಮತ್ತು ಟ್ವಿಟ್ಟರ್ ಚಾನೆಲ್ಗಳಲ್ಲಿ ಜನರು ಲೈವ್ಗಳಲ್ಲಿ ವೀಕ್ಷಿಸಬಹುದು ಎಂದು ಇಸ್ರೋ ಹೇಳಿದೆ.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment