ಜನವರಿ 12 ರಂದು ಶಿವಮೊಗ್ಗದಲ್ಲಿ ಯುವನಿಧಿಗೆ ಚಾಲನೆ

Team Newsnap
1 Min Read

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ 5 ಗ್ಯಾರಂಟಿಗಳ ಪೈಕಿ ಒಂದಾದ ಯುವನಿಧಿ ಯೋಜನೆ ಜಾರಿಗೆ ಕಾಲ ಕೂಡಿ ಬಂದಿದ್ದು, 2024ರ ಜನವರಿ 12ರಂದು ಶಿವಮೊಗ್ಗದಲ್ಲಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಮಾಹಿತಿ ನೀಡಿದ್ದಾರೆ .

ಡಿಸೆಂಬರ್​ 21ರಂದು ಸರ್ಕಾರ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಿಸಲು ಚಿಂತನೆ ನಡೆಸಿತ್ತು. ಡಿಸೆಂಬರ್​ 26ಕ್ಕೆ ಕಾರಣಾಂತರಗಳಿಂದ ಅರ್ಜಿ ಸಲ್ಲಿಕೆಯನ್ನು ಮುಂದೂಡಿ ನಿಗದಿಪಡಿಸಲಾಗಿತ್ತು .

ಈ ಯೋಜನೆ ಪದವಿ ಹೊಂದಿರುವವರಿಗೆ ಮತ್ತು ಡಿಪ್ಲೊಮಾ ತೇರ್ಗಡೆ ಆದವರಿಗೆ ಅನ್ವಯಿಸುತ್ತದೆ ಮತ್ತು 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು.

ನಿರುದ್ಯೋಗಿ ಪದವೀಧರರಿಗೆ ಯೋಜನೆಯಡಿ ಮಾಸಿಕ 3 ಸಾವಿರ ರೂ., ಡಿಪ್ಲೊಮಾ ಹೊಂದಿರುವವರಿಗೆ 1,500 ಆರ್ಥಿಕ ನೆರವು ನೀಡಲಾಗುತ್ತದೆ.

ಎರಡು ವರ್ಷ ಅವಧಿಯಲ್ಲಿ ಉದ್ಯೋಗ ಸಿಗುವವರೆಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.

ಯುವನಿಧಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿ ಕರ್ನಾಟಕದ ನಿವಾಸಿಯಾಗಿರುವ ಬಗ್ಗೆ ಸೂಕ್ತ ದಾಖಲೆ, ಹತ್ತನೇ ತರಗತಿ, ದ್ವಿತೀಯ ಪಿಯುಸಿ ಹಾಗೂ ಪದವಿ ಅಂಕಪಟ್ಟಿ, ಆಧಾರ್‌ ಕಾರ್ಡ್‌, ಜಾತಿ ಪ್ರಮಾಣ ಪತ್ರ(ಅನ್ವಯಿಸಿದಲ್ಲಿ), ಬ್ಯಾಂಕ್ ಖಾತೆ ವಿವರ, ಆದಾಯ ಪ್ರಮಾಣಪತ್ರ ದಾಖಲೆಯನ್ನೊಳಗೊಂಡ ಸ್ವಯಂ ಘೋಷಣಾ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನಿರುದ್ಯೋಗ ಯುವ ನಿಧಿ ಭತ್ಯೆ ಪಡೆದುಕೊಳ್ಳಲು ಬೇಕಾಗಿರುವ ದಾಖಲೆಗಳು ಹೀಗಿದೆ :

  • ಆಧಾರ್ ಕಾರ್ಡ್
  • ಇ-ಮೇಲ್ ಐಡಿ
  • ಭಾವಚಿತ್ರ
  • ಶಿಕ್ಷಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿ
  • ಬ್ಯಾಂಕ ಖಾತೆಯ ವಿವರ
  • ಮೊಬೈಲ್ ಸಂಖ್ಯೆ
  • ಆದಾಯ ಪ್ರಮಾಣ ಪತ್ರ
  • ಪದವಿ ಹಾಗೂ ಡಿಪ್ಲಮೋ ಮುಗಿಸಿದವರ ಕೊನೆಯ ವರ್ಷದ ಅಂಕಪಟ್ಟಿ.

Share This Article
Leave a comment