ಭೂತನಹೊಸೂರಿನಲ್ಲಿ ಮಾದರಿ ಕೆರೆ ಹೂಳೆತ್ತುವ ಕಾರ್ಯಕ್ರಮಕ್ಕೆ ಚಾಲನೆ‌

Team Newsnap
2 Min Read

ಮಂಡ್ಯ ತಾಲೂಕಿನ ಭೂತನಹೊಸೂರು ಗ್ರಾಮದ ದೊಡ್ಡಕಟ್ಟೆ ಅವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೊಡ್ಡ ಕಟ್ಟೆ ಕೆರೆ ಅಭಿವೃದ್ಧಿ ಸಮಿತಿ ಹಾಗೂ ಗ್ರಾಮಪಂಚಾಯಿತಿ ಸಹಭಾಗಿತ್ವದಲ್ಲಿ 254 ನೇ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ ಮಾದರಿ ಕೆರೆಯ ಹೂಳೆತ್ತುವ ಕಾರ್ಯಕ್ರಮ ಉದ್ಘಾಟನೆಗೊಂಡಿತು

housuru1

ಉದ್ಘಾಟನೆ ನೆರವೇರಿಸಿ ಕೊಟ್ಟ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಪಿ ಗಂಗಾಧರ ರೈ ಮಾತನಾಡಿ ಗ್ರಾಮಗಳ ಅಭಿವೃದ್ಧಿಗೆ ಸಮಗ್ರ ಯೋಜನೆಗಳನ್ನು ರೂಪಿಸಿಕೊಂಡ ಹಿನ್ನೆಲೆಯಲ್ಲಿ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಲ್ಲಿ ಹೂಳೆತ್ತುವ ಕೆಲಸವನ್ನು ಮಾಡುತ್ತಿದ್ದೇವೆ ಜೊತೆಗೆ ಈ ಕೆರೆಯನ್ನು ಮಾದರಿ ಕೆರೆಯಾಗಿ ಮಾಡುತ್ತೇವೆ ಎಂದರು.

ಕೆರೆಗಳ ಹೂಳೆತ್ತುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗುತ್ತದೆ ಇದರಿಂದ ಕೃಷಿಕರಿಗೆ ತುಂಬಾ ಅನುಕೂಲವಾಗುತ್ತದೆ ಹಾಗೂ ಈ ಮಾದರಿ ಕೆರೆಯಲ್ಲಿ ಕೆರೆಯ ಸುತ್ತ ಕಲ್ಲು ಕಟ್ಟುವುದು ಬೇಲಿ ನಿರ್ಮಿಸುವುದು ಪುಟ್ಬಾತ್ ವ್ಯವಸ್ಥೆ ಮಾಡಿಸುವುದು ಗಿಡಗಳನ್ನು ನಾಟಿ ಮಾಡುವುದು ನೀರಿನ ತೊಟ್ಟಿ ನಿರ್ಮಾಣ ಮಾಡುವುದು ಹೀಗೆ ವಿವಿಧ ರೀತಿಯ ಕೆಲಸಗಳನ್ನು ಮಾಡಿ ಈ ಕೆರೆಯನ್ನು ಮಾದರಿ ಕೆರೆಯಾಗಿ ಮಾಡಲಾಗುವುದು ಎಂದರು

ನಂತರ ದೊಡ್ಡ ಕಟ್ಟೆ ಕೆರೆ ಅಭಿವೃದ್ಧಿ ಸಮಿತಿಯ ಗೌರವ ಸಲಹೆಗಾರರಾದ ಎಚ್ಎಸ್ ಜಯರಾಮ ರವರು ಮಾತನಾಡಿ ಧರ್ಮಸ್ಥಳ ಸಂಸ್ಥೆಯು ಕೆರೆಗಳ ಅಭಿವೃದ್ಧಿ ಮಾಡುತ್ತಿರುವುದು ತುಂಬಾ ಒಳ್ಳೆಯ ಕೆಲಸ ನಮ್ಮೂರಿನ ಕೆರೆಯನ್ನು ಅಭಿವೃದ್ಧಿ ಮಾಡುತ್ತಿರುವುದು ಸಂತೋಷದ ವಿಷಯ ಸಂಸ್ಥೆಯ ಜೊತೆ ಕೈಜೋಡಿಸಿ ನಮ್ಮೂರಿನ ಕೆರೆಯನ್ನು ಮಾದರಿ ಕೆರೆಯಾಗಿ ರೂಪಿಸುವ ಎಂದು ತಿಳಿಸಿದರು

ನಂತರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಶ್ರೀಮತಿ ನಂದಿನಿ ಮಾತನಾಡಿ ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಭೂತನಹೊಸೂರು ಕೆರೆಯನ್ನು ಆಯ್ಕೆ ಮಾಡಿಕೊಂಡಿರುವುದು ತುಂಬಾ ಒಳ್ಳೆಯ ವಿಷಯ ಇದರಿಂದ ಗ್ರಾಮಸ್ಥರಿಗೆ ಮತ್ತು ರೈತರಿಗೆ ಅನುಕೂಲವಾಗುತ್ತದೆ ಆದ್ದರಿಂದ ಪಂಚಾಯಿತಿ ವತಿಯಿಂದ ಸಹಕಾರ ನೀಡಲಾಗುವುದು ಎಂದು ತಿಳಿಸಿದರು

ನಂತರ ದೊಡ್ಡಕಟ್ಟೆ ಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಎಚ್ ಡಿ ರಾಜುರವರು ಮಾತನಾಡಿ ಧರ್ಮಸ್ಥಳ ಸಂಸ್ಥೆ ಅನೇಕ ಒಳ್ಳೆಯ ಕಾರ್ಯಕ್ರಮ ಗಳನ್ನು ಮಾಡುತ್ತಾ ಬಂದಿದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಜನಪರ ಕಾರ್ಯಕ್ರಮಗಳನ್ನು ಮಾಡಲಿ ಹಾಗೂ ನಮ್ಮ ಸಮಿತಿಯ ಎಲ್ಲ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಸಂಪೂರ್ಣ ಸಹಕಾರವನ್ನು ನೀಡುವ ಎಂದು ತಿಳಿಸಿದರು

ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕರಾದ ವಿನಯಕುಮಾರ್ ಸುವರ್ಣ, ಕೆರೆಯ ಅಭಿಯಂತರು ಸುರೇಶ್, ತಾಲೂಕು ಯೋಜನಾಧಿಕಾರಿ ನಾರಾಯಣ ಪಾಟಾಳಿ, ದೊಡ್ಡ ಕಟ್ಟೆ ಕೆರೆ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಶ್ರೀ ಸಿದ್ದೇಶ್ವರ ಗ್ರಾಮಾಭಿವೃದ್ಧಿ ಸೇವಾ ಟ್ರಸ್ಟ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a comment