ರಾಜ್ಯ ಸರ್ಕಾರಿ ನೌಕರರಿಗೆ ಫೆ.27, 28ರಂದು ವಿಶೇಷ ಸಾಂದರ್ಭಿಕ ರಜೆ

Team Newsnap
1 Min Read

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ವತಿಯಿಂದ ಫೆಬ್ರವರಿ 27ರಂದು ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು ನಗರದ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ (ಗೇಟ್‌ ನಂ.1) ಫೆ. 27ರಂದು ಬೆಳಗ್ಗೆ 10.30ಕ್ಕೆ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ನಡೆಯಲಿದೆ.

ರಜೆಯನ್ನು ಹೇಗೆ ಪಡೆಯುವುದು ?

ಈ ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಛಿಸುವ ಸರ್ಕಾರಿ ನೌಕರರು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ನಂತರ ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರಾತಿ ಪತ್ರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಅಥವಾ ಅವರಿಂದ ನಾಮನಿರ್ದೇಶನ ಹೊಂದಿದ ಅಧಿಕಾರಿಗಳಿಂದ ಪಡೆದು ಒದಗಿಸಬೇಕು. ಈ ಆಧಾರದ ಮೇಲೆ ಸಂಬಂಧಪಟ್ಟ ಅಧಿಕಾರಿಗಳು, ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡತಕ್ಕದ್ದು ಎಂದು ಸೂಚನೆ ನೀಡಲಾಗಿದೆ.ಶೀಘ್ರದಲ್ಲಿ ಕ್ಯಾನ್ಸರ್ ಲಸಿಕೆ ಲಭ್ಯವಾಗಲಿದೆ : ರಷ್ಯಾ ಅದ್ಯಕ್ಷ ಪುಟಿನ್ ಘೋಷಣೆ

ನೌಕರರ ಮಹಾ ಸಮ್ಮೇಳನ ಉದ್ಘಾಟಿಸಲಿರುವ ಸಿಎಂ

ಫೆಬ್ರವರಿ 27ರಂದು ಬೆಳಗ್ಗೆ 11 ಗಂಟೆಗೆ ಸರ್ಕಾರಿ ನೌಕರರ ಮಹಾ ಸಮ್ಮೇಳನ ಹಾಗೂ ಪ್ರಜಾಸ್ನೇಹಿ ಕಾರ್ಯಾಗಾರವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಆಶಯ ನುಡಿಗಳನ್ನಾಡಲಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

Share This Article
Leave a comment