ಅಧಿಕಾರ ಬಿಟ್ಟು ತೊಲಗಲಿ

Team Newsnap
1 Min Read
  • ಗ್ಯಾರಂಟಿ ಜಾರಿ ವಿಳಂಬಕ್ಕೆ ಬಿಎಸ್‍ವೈ ಆಕ್ರೋಶ

ದಾವಣಗೆರೆ: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳನ್ನು ಈಡೇರಿಸಲು ಸಾಧ್ಯವಾಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರನ್ನು ಮರುಳು ಮಾಡಲು ಕಾಂಗ್ರೆಸ್ ದಿನಕ್ಕೊಂದು ನಾಟಕ ಆಡುತ್ತಿದೆ. ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನ ಕೇಳಿ ಜನರಿಗೆ ಭರವಸೆ ಕೊಟ್ಟಿದ್ದರಾ? ಚುನಾವಣೆಯಲ್ಲಿ ಗೆಲ್ಲಬೇಕೆಂದು ಕಾಂಗ್ರೆಸ್‍ನವರೇ ಭರವಸೆ ಕೊಟ್ಟಿದ್ದಾರೆ.

ಕೇಂದ್ರ ಸರ್ಕಾರ ಈಗಾಗಲೇ ತಲಾ 5 ಕೆಜಿ ಅಕ್ಕಿ ಕೊಡುತ್ತಿದೆ. ಜನರಿಗೆ ಭರವಸೆ ಕೊಟ್ಟಂತೆ ಸಿದ್ದರಾಮಯ್ಯ 10 ಕೆಜಿ ಅಕ್ಕಿ ಕೊಡಲೇಬೇಕು. 10 ಕೆಜಿ ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಬಿಎಸ್‍ವೈ ಹರಿಹಾಯ್ದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಭರವಸೆ ಈಡೇರಿಸದಿದ್ದರೆ ವಿಧಾನಸಭೆ ಮುಂದೆ ಧರಣಿ ನಡೆಸುವುದಾಗಿ ಬಿಎಸ್‍ವೈ ಹೇಳಿದ್ದಾರೆ. ಅದಕ್ಕಾಗಿ ರಾಜ್ಯದಲ್ಲಿ ಏಳು ತಂಡಗಳು ಪ್ರವಾಸ ಕೈಗೊಂಡಿವೆ. ರಾಜ್ಯ ಸರ್ಕಾರದ ಐದು ಭರವಸೆ ಈಡೇರಿಸಬೇಕು.

ಇದನ್ನು ಓದಿ – ರಾಜಕೀಯ ದ್ವೇಷ ಬೇಡ

ಇಲ್ಲದಿದ್ದಲ್ಲಿ ಬಿಜೆಪಿಯ ಏಳು ತಂಡಗಳು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಎಲ್ಲೆಡೆ ಧರಣಿ ನಡೆಲಾಗುವುದು ಎಂದರು.

Share This Article
Leave a comment