ತನ್ನ ಸಹಪಾಠಿ ಉಪನ್ಯಾಸಕಿಯರ ಜೊತೆಯಲ್ಲೇ ಅಸಭ್ಯವಾಗಿ ವರ್ತಿಸುತ್ತಿದ್ದ ಉಪನ್ಯಾಸಕನಿಗೆ ಕಾಲೇಜಿನ ಸ್ಟಾಫ್ ರೂಮ್‍ನಲ್ಲಿ ಉಪನ್ಯಾಸಕಿಯರೇ ಹಿಗ್ಗಾಮುಗ್ಗ ಥಳಿಸಿ ಸಾಕಷ್ಟು ಗೂಸ ಕೊಟ್ಟ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ಏ. 12 ರಂದು ಜರುಗಿದೆ.
ಬೆಳಗಾವಿಯ ಸರ್ಕಾರಿ ಸರ್ದಾರ್ ಪಿಯು ಕಾಲೇಜಿನಲ್ಲಿ ನಡೆದಿದ ಈ ಘಟನೆಯ ಆರೋಪಿ ಅಮಿತ್ ಬಸವಮೂರ್ತಿ ಎಂದು ಗುರುತಿಸಲಾಗಿದೆ.
ಇಂಗ್ಲಿಷ್ ವಿಭಾಗದ ಖಾಯಂ ಉಪನ್ಯಾಸಕ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಮಿತ್ ಬಸವಮೂರ್ತಿ ನಿತ್ಯ ಮದ್ಯ ಸೇವಿಸಿ ಕಾಲೇಜಿಗೆ ಆಗಮಿಸಿ ಉಪನ್ಯಾಸಕಿಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ. ಅಲ್ಲದೇ ಮಹಿಳಾ ಸಿಬ್ಬಂದಿ ಇರುವ ವಿಶ್ರಾಂತಿ ಕೊಠಡಿಗೆ ತೆರಳಿ ಉಪನ್ಯಾಸಕಿಯರ ಜೊತೆಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಲಾಗಿದೆ.
ಈ ವಿಚಾರವಾಗಿ ಕಾಲೇಜಿನ ಪ್ರಾಂಶುಪಾಲರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಹೀಗಾಗಿ ಉಪನ್ಯಾಸಕಿಯರೆಲ್ಲಾ ಸೇರಿ ಆರೋಪಿಗೆ ಕಾಲಿನಿಂದ ಒದ್ದು, ಚಪ್ಪಲಿ ಹಾಗೂ ಕೋಲಿನಿಂದ ಧರ್ಮದೇಟು ನೀಡಿದ್ದಾರೆ. ಉಪನ್ಯಾಸಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಅತಿಥಿ ಉಪನ್ಯಾಸಕಿಯರು ಖಾಯಂ ಉಪನ್ಯಾಸಕನಿಗೆ ಹಿಗ್ಗಾಮುಗ್ಗ ಥಳಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು