November 16, 2024

Newsnap Kannada

The World at your finger tips!

sidda

Pic Credits : deccanherald.com

ವಿಧಾನಸಭೆ ಕಲಾಪದ ಅವಧಿ ವಿಸ್ತರಣೆಗೆ ಸಿದ್ದರಾಮಯ್ಯ ಒತ್ತಾಯ

Spread the love

ಬೆಂಗಳೂರು :

ಮಹತ್ವದ ಹಲವಾರು ವಿಚಾರಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಯುವ ಅಗತ್ಯವಿರುವುದರಿಂದ ಸೆ 21ರಿಂದ ನಡೆಸಲು ಉದ್ದೇಶಿಸಿರುವ ವಿಧಾನಸಭೆ ಕಲಾಪದ ಅವಧಿಯನ್ನು ಅಕ್ಟೋಬರ್ 15ರವರೆಗೆ ವಿಸ್ತರಿಸುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪೀಕರ್ ಹಾಗೂ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಪಾತ್ರದಲ್ಲಿ ಏನಿದೆ?

ಅಧಿವೇಶನದ ಅವಧಿಯನ್ನು ಸೆಪ್ಟೆಂಬರ್ 21 ರಿಂದ 30 ರವರೆಗೆ 15ನೇ ವಿಧಾನಸಭೆಯ 7ನೇ ಅಧಿವೇಶನದ ಕಾರ್ಯಕಲಾಪಗಳನ್ನು ನಡೆಸಲು ಪ್ರಕಟಣೆ ಹೊರಡಿಸಲಾಗಿದೆ. ಈ ಪ್ರಕಟಣೆಯಂತೆ 21, 22, 23, 24, 25, 28, 29 ಮತ್ತು 30 ರವರೆಗೆ ಅಧಿವೇಶನವನ್ನು ನಡೆಸಲು ಉದ್ದೇಶಿಸಲಾಗಿದೆ. ಈ ಅಧಿವೇಶನದಲ್ಲಿ ಸುಮಾರು 20 ಕ್ಕಿಂತ ಹೆಚ್ಚು ಸುಗ್ರಿವಾಜ್ಞೆಗಳನ್ನು ಒಳಗೊಂಡಂತೆ 35 ಕ್ಕಿಂತ ಹೆಚ್ಚು ಮಸೂದೆಗಳನ್ನು ಮಂಡಿಸಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಕರ್ನಾಟಕ ರಾಜ್ಯದ ಜನರು ಹಿಂದೆಂದೂ ಕಂಡರಿಯದ ರೀತಿಯಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಪದೇ ಪದೇ ಪ್ರವಾಹಗಳು ಬಂದೆರಗುತ್ತಿದೆ. ಕಳೆದ ಮಾರ್ಚ್‍ನಿಂದ ಕೋವಿಡ್-19 ಸಾಂಕ್ರಾಮಿಕವು ಮಾರಣಾಂತಿಕವಾಗಿ ವ್ಯಾಪಿಸಿಕೊಂಡು ರಾಜ್ಯದ ಜನರ ಬದುಕನ್ನು ಹೈರಾಣಾಗಿಸಿದೆ ಮತ್ತು ಸುಮಾರು 6,500 ಕ್ಕಿಂತ ಹೆಚ್ಚು ಜನ ಈ ಸೋಂಕಿನಿಂದಾಗಿ ಮೃತಪಡುವಂತೆ ಮಾಡಿದೆ. ಪದೇ ಪದೇ ಕಾನೂನು ಸುವ್ಯವಸ್ಥೆಯ ಸಮಸ್ಯೆಗಳು ಉಂಟಾಗುತ್ತಿವೆ, ಜೊತೆಯಲ್ಲಿ ಡ್ರಗ್ಸ್‍ನಂತಹ ಅಪಾಯಕಾರಿ ಚಟುವಟಿಕೆಗಳು ರಾಜ್ಯವನ್ನು ಆವರಿಸಿಕೊಂಡಿವೆ.

ಇಂತಹ ಸನ್ನಿವೇಶದಲ್ಲಿ ಅಧಿವೇಶನವನ್ನು ನಡೆಸಲಾಗುತ್ತಿದೆ. ಆದರೆ ಅಧಿವೇಶನದ ಸಮಯ ಮಾತ್ರ ಯಾವುದಕ್ಕೂ ಸಾಕಾಗುವುದಿಲ್ಲ. ಜನರ ಮೇಲೆ ಕಾಳಜಿ ಇಲ್ಲದೆ ನೆಪ ಮಾತ್ರಕ್ಕೆ ಅಧಿವೇಶನ ನಡೆಸಲು ಉದ್ದೇಶಿಸುವಂತೆ ಕಾಣಿಸುತ್ತಿದೆ. ಹಲವು ಜನ ವಿರೋಧಿಯಾದ ಸುಗ್ರಿವಾಜ್ಞೆಗಳನ್ನು ಚರ್ಚೆಯನ್ನೇ ನಡೆಸದೆ ಅಂಗೀಕಾರ ಪಡೆಯಲು ಯತ್ನಿಸುತ್ತಿರುವುದು ಅತ್ಯಂತ ಜನ ದ್ರೋಹಿಯಾದ, ಬೇಜವಾಬ್ದಾರಿಯುತವಾದ ಮತ್ತು ದುಷ್ಟತನದ ಪರಮಾವಧಿಯಂತೆ ಕಾಣುತ್ತಿದೆ. ಸರ್ಕಾರ ಈ ವಿಚಾರದಲ್ಲಿ ಅತ್ಯಂತ ಅಸಂವಿಧಾನಿಕವಾಗಿ ನಡೆದುಕೊಳ್ಳುತ್ತಿದೆ.
ಕೇವಲ 8 ದಿನಗಳಲ್ಲಿ ಇಷ್ಟೊಂದು ಮಹತ್ವದ ವಿಚಾರಗಳನ್ನು ಚರ್ಚಿಸಲು ಸಾಧ್ಯವಿಲ್ಲ. ಹಾಗಾಗಿ ಈ ಅಧಿವೇಶನವನ್ನು ಕನಿಷ್ಠ 3 ವಾರಗಳ ಕಾಲ ಅಂದರೆ ಅಕ್ಟೋಬರ್ 15 ರವರೆಗೆ ವಿಸ್ತರಿಸಬೇಕೆಂದು ಆಗ್ರಹಿಸುತ್ತೇನೆ.

Copyright © All rights reserved Newsnap | Newsever by AF themes.
error: Content is protected !!