February 19, 2026

Newsnap Kannada

The World at your finger tips!

leopard , attack ,

ಮಂಡ್ಯದಲ್ಲಿ ಭದ್ರಾವತಿ ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ

Spread the love

ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದ ಬಳಿ ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ಮೇಲೆ ಚಿರತೆ ದಾಳಿ ಮಾಡಿದೆ. ವ್ಯಕ್ತಿಗೆ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭದ್ರಾವತಿ ಮೂಲದ ಜಯರಾಮ್​ ಎಂಬುವವರ ಮೇಲೆ ಚಿರತೆ ದಾಳಿ ಮಾಡಿದೆ.ಈತ ಗ್ರಾಮದ ಬಳಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಚಿರತೆ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡ ಜಯರಾಮ್​ನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ರಾಯಸಮುದ್ರ ಗ್ರಾಮಸ್ಥರಲ್ಲಿ ಆತಂಕ ಆರಂಭವಾಗಿದೆ.

ಇದನ್ನು ಓದಿ –ಒಡಿಶಾ ಆರೋಗ್ಯ ಸಚಿವರಿಗೆ ಗುಂಡೇಟು : ಚಿಕಿತ್ಸೆ ಫಲಿಸದೆ ಸಾವು

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ರಾಮತುಂಗಾ ಗ್ರಾಮದಲ್ಲಿ ಹಲವು ದಿನಗಳಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಇದೀಗ ಇಟ್ಟಿದ್ದ ಬೋನಿಗೆ ಬಿದ್ದಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

error: Content is protected !!