ಟಿ.ನರಸೀಪುರದಲ್ಲಿ ಮತ್ತೆ ಚಿರತೆ ಅಟ್ಟಹಾಸ: ರೈತನ ಮೇಲೆ ದಾಳಿ, ಗಂಭೀರ ಗಾಯ

Team Newsnap
1 Min Read
Leopard attack on Bhadravati laborer in Mandya ಮಂಡ್ಯದಲ್ಲಿ ಭದ್ರಾವತಿ ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ

ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಚಿರತೆ ದಾಳಿಯ ಹಾವಳಿ ಮುಂದುವರೆದಿದೆ. ಕೆಲ ದಿನಗಳ ಹಿಂದೆ ಯುವತಿಯ ಮೇಲೆ ದಾಳಿ ನಡೆಸಲಾಗಿತ್ತು. ಯುವತಿ ಸಾವನ್ನು ಕೂಡ ಅಪ್ಪಿದ್ದಳು.

ಭಾನುವಾರ ಮತ್ತೆ ರೈತನ ಮೇಲೆ ಚಿರತೆ ಅಟ್ಟಹಾಸ ಮೆರೆದಿದೆ. ರೈತ ಚಿರತೆ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.ರಾಜ್ಯದ 93 ಕ್ಷೇತ್ರಗಳಲ್ಲಿ ಸ್ಪರ್ದೆ ಮಾಡುವ ಜೆಡಿಎಸ್ ಪಟ್ಟಿ ಬಿಡುಗಡೆ -ಅಪ್ಪ , ಮಕ್ಕಳಿಗೆ ಟಿಕೆಟ್

ಟಿ.ನರಸೀಪುರದ ನುಗ್ಗಳ್ಳಿಕೊಪ್ಪಲು ಗ್ರಾಮದ ರೈತ ಸತೀಶ್ ತನ್ನ ಕಬ್ಬಿನ ಗದ್ದೆಗೆ ನೀರು ಹಾಯಿಸಲು ತೆರಳಿದ್ದರು. ಈ ವೇಳೆ ಹಿಂದಿನಿಂದ ಬಂದಿರುವ ಚಿರತೆ ದಿಢೀರ್ ದಾಳಿ ನಡೆಸಿದೆ.

ಏಕಾಏಕಿ ಚಿರತೆ ದಾಳಿಯಿಂದಾಗಿ ಗಾಬರಿಗೊಂಡ ರೈತ ಸತೀಶ್,ತಪ್ಪಿಸಿಕೊಂಡಿದ್ದಾರೆ.

ಚಿರತೆ ದಾಳಿಯಿಂದ ತಪ್ಪಿಸಿಕೊಂಡ ಅವರನ್ನು ಗ್ರಾಮಸ್ಥರು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನೂ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Share This Article
Leave a comment