ಸಿದ್ದರಾಮಯ್ಯ ನ್ಯಾಯಾಲಯದ ತೀರ್ಪು ಬರುವ ಮೊದಲು ರಾಜೀನಾಮೆ ನೀಡಲಿ: ಬಿ ಎಸ್ ಯಡಿಯೂರಪ್ಪ

Team Newsnap
1 Min Read

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಲಯದ ತೀರ್ಪು ಬರುವ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಲಹೆ ನೀಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪು ನೂರಕ್ಕೆ ನೂರು ಬರುತ್ತದೆ. ತೀರ್ಪು ಬಂದ ನಂತರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ. ಯಾಕೆಂದರೆ ಸಿಎಂ ಸಿದ್ದರಾಮಯ್ಯ ಮಾಡಿರುವ ಹಗರಣಗಳು ಸಾರ್ವಜನಿಕವಾಗಿದೆ ಎಂದಿದ್ದಾರೆ.

ಸಿದ್ದರಾಮಯ್ಯನವರಿಗೆ ತಪ್ಪಿಸಿಕೊಳ್ಳಲು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ. ಅದಕ್ಕಿಂತ ಮೊದಲೇ ಗೌರವಯುತವಾಗಿ ರಾಜೀನಾಮೆ ಕೊಡುವುದು ಉತ್ತಮ.ಅವರು ಮಾಡಿರುವ ಎಲ್ಲಾ ಹಗರಣ ಸಾಬೀತಾಗುತ್ತಿವೆ. ಮುಡಾ ಹಗರಣ ಜಗಜ್ಜಾಹೀರು ಆಗಿರುವ ಸಂಗತಿಯಾಗಿದೆ.

ನಾವು ಹೋರಾಟ ಮಾಡಲ್ಲ. ಇನ್ನುಳಿದ ನಾಲ್ವರು ಸಚಿವರಿಗೆ ರಾಜ್ಯಪಾಲರು ನೋಟಿಸ್ ನೀಡಿದ್ದು, ಅವರು ಸಂಪೂರ್ಣ ಸ್ವತಂತ್ರರಾಗಿದ್ದಾರೆ.ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್ ಜೋಡಿ

ಸಿದ್ದರಾಮಯ್ಯ ಅವರ ತನಿಖೆ ಬಹುತೇಕ ಮುಗಿಯುವ ಹಂತ ತಲುಪಿದ್ದು ,ಅವರು ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಹೇಳಿದ್ದಾರೆ.

Share This Article
Leave a comment