ನೀಟ್ ಪರೀಕ್ಷೆಯಲ್ಲಿ ನಕಲು (ಕಾಪಿ) ಮಾಡುವುದನ್ನು ಸಮರ್ಥಿಸಿ ಕೊಂಡು, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನೀಟ್ ಪರೀಕ್ಷೆ ಯಲ್ಲಿ ಕಾಪಿ ಮಾಡಲು ಅವಕಾಶ ಮಾಡಿಕೊಡುತ್ತವೆ ಎಂದು
ತಿರುಚ್ಚಿ ಯಲ್ಲಿ ನಡೆದ ಪಕ್ಷದ ಪ್ರಚಾರ ಸಭೆಯಲ್ಲಿ ಮಾಜಿ ಸಚಿವ ಕೆ. ಎನ್. ನೆಹರೂ ವಿವಾದಾತ್ಮಕ ಹೇಳಿಕೆ ನೀಡಿದರು.
ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರ ಜೋರಾಗಿದೆ. ರಾಜಕೀಯ ಪಕ್ಷಗಳ ನಾಯಕರು ಜನರನ್ನು ಒಲೈಕೆ ಮಾಡಲು ಅಶ್ವಾಸನೆಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.
ಪ್ರಚಾರ ಕಾರ್ಯದಲ್ಲಿ ಭಾಷಣ ಮಾಡಿದ. ಮಾಜಿ ಸಚಿವ ನೆಹರೂ,
ನೀಟ್ ಪರೀಕ್ಷೆಯಲ್ಲಿ ಕಾಪಿ ಹೊಡೆಯಲು ಅವಕಾಶ ನೀಡುತ್ತೇವೆ. ಬಿಹಾರ ಮತ್ತು ಮಧ್ಯ ಪ್ರದೇಶ, ಉತ್ತರ ಪ್ರದೇಶಗಳ ಪರೀಕ್ಷೆಗಳಲ್ಲಿ ನಕಲು ಮಾಡಲು ಅವಕಾಶ ನೀಡಿದ್ದಾರೆ. ತಮಿಳುನಾಡಿನ ವಿದ್ಯಾರ್ಥಿಗಳು ಮಾತ್ರ ನಿಸ್ವಾರ್ಥವಾಗಿ ಪರೀಕ್ಷೆ ಬರೆಯುತ್ತಿದ್ದಾರೆ. ನಾವು ಮಾತ್ರ ಏಕೆ ಈ ರೀತಿ ಮಾಡಬೇಕು? ಎಂದು ಪ್ರಶ್ನೆ ಮಾಡಿದರು.
ಡಿಎಂಕೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೇ ಯುಪಿ, ಎಂಪಿ ರಾಜ್ಯಗಳು ನೀಡುವಂತೆಯೇ ನಾವು ಮೆಡಿಕಲ್ ವಿದ್ಯಾರ್ಥಿಗಳಿಗೆ ನೀಡುತ್ತೇವೆ. ಸಾಧ್ಯವಾದರೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು. ಅದು ಸಾಧ್ಯವಾಗದಿದ್ದರೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳಿಗೆ ನಕಲು ಮಾಡಲು ಅವಕಾಶ ನೀಡುತ್ತೇವೆ ಎಂದು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ