ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರಿಗೆ ಜೀವ ಬೆದರಿಕೆ ಪತ್ರ ಬಂದಿದೆ. ಈ ಬಗ್ಗೆ ಡಿಜಿ-ಐಜಿಪಿಗೆ ಸಿದ್ದು ಮಾಹಿತಿ ನೀಡಿದ್ದಾರೆ.
ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದು ಅವರು, ರಾಜ್ಯದ ಬರಹಗಾರರು, ಚಿಂತಕರು ಮತ್ತು ವಿರೋಧ ಪಕ್ಷದ ನಾಯಕರುಗಳಿಗೆ ಪದೇ ಪದೇ ಜೀವ ಬೆದರಿಕೆಯ ಪತ್ರಗಳನ್ನು ದಾವಣಗೆರೆ, ಭದ್ರಾವತಿ, ಅಜ್ಜಂಪುರ ಮುಂತಾದ ಊರುಗಳಿಂದ ಪೋಸ್ಟ್ ಮಾಡಲಾಗುತ್ತಿದೆ.
ಕುಂ. ವೀರಭದ್ರಪ್ಪನವರಿಗೆ 6 ಪತ್ರ, ಬಂಜಗೆರೆ ಜಯಪ್ರಕಾಶ್ ಅವರಿಗೆ 5 ಪತ್ರ, ಬಿ.ಟಿ.ಲಲಿತಾ ನಾಯಕ್, ಬಿ.ಎಲ್ ವೇಣು, ಚಂದ್ರಶೇಖರ್ ತಾಳ್ಯ ಅವರಿಗೆ ತಲಾ 2 ಪತ್ರ, ಎಸ್.ಜಿ ಸಿದ್ದರಾಮಯ್ಯ ಮತ್ತು ವಸುಂಧರ ಭೂಪತಿಯವರುಗಳಿಗೆ ಒಂದೊಂದು ಪತ್ರಗಳನ್ನು ಬರೆಯಲಾಗಿದೆ.
ಇವರುಗಳೆಲ್ಲರೂ ಪ್ರಜಾತಾಂತ್ರಿಕ ಮೌಲ್ಯ ಹಾಗೂ ಸಂವಿಧಾನದ ಆಶಯಗಳನ್ನು ರಕ್ಷಿಸುವ ಸಲುವಾಗಿ ಹೋರಾಡುತ್ತಿದ್ದಾರೆ. ಹಾಗಾಗಿ ಹಲವು ಬಾರಿ ಆಡಳಿತಾರೂಢ ಸರ್ಕಾರದ ವಿರುದ್ಧ ಮಾತನಾಡಲೇಬೇಕಾಗುತ್ತದೆ. ಇದಿಷ್ಟನ್ನೂ ಸಹಿಸದ ಕಿಡಿಗೇಡಿಗಳು ಜೀವ ಬೆದರಿಕೆಗಳನ್ನು ಒಡ್ಡುವ ಹೀನ ಕೆಲಸ ಮಾಡುತ್ತಿದ್ದಾರೆ. ಅನೇಕ ಸಾರಿ ನನ್ನ ಸೋಷಿಯಲ್ ಮೀಡಿಯಾ ಖಾತೆಗಳಿಗೂ ಬಂದು ಹೀನಮನೋವೃತ್ತಿ ತೋರುವವರೂ ಇದ್ದಾರೆ ಎಂದಿದ್ದಾರೆ
ನನಗೂ ಹಲವು ಬೆದರಿಕೆ ಪತ್ರಗಳು ಬಂದಿವೆ. ಸ್ವತಃ ಡಿಜಿಯವರಿಗೆ ನಾನು ಈ ಕುರಿತು ಮಾತನಾಡಿದ್ದೆ. ಇತ್ತೀಚೆಗೆ ಟಿವಿಯೊಂದರಲ್ಲಿ ವೀರೇಶ್ ಎಂಬಾತ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ನನಗೆ ಗುಂಡು ಹಾರಿಸಬೇಕೆಂದು ಹೇಳಿಕೆ ಕೊಟ್ಟಿದ್ದ. ಈ ಬೆದರಿಕೆಯ ಹೇಳಿಕೆ ಹಾಗೂ ಪತ್ರಗಳ ಕುರಿತು ದೂರು ದಾಖಲಿಸಲಾಗಿದೆ.
ಆದರೂ ಇದುವರೆಗೆ ಸರ್ಕಾರ ಎಫ್‍ಐಆರ್ ದಾಖಲಿಸಿಲ್ಲ. ಇದೇ ವಿಷಯಕ್ಕೆ ಹಲವು ಬಾರಿ ದೂರು ದಾಖಲಿಸಿದರೂ ಎಫ್‍ಐಆರ್ ಮಾಡಿ ತನಿಖೆ ನಡೆಸದಿರುವುದು ಸರ್ಕಾರದ ಬೇಜವಾಬ್ಧಾರಿಯುತವಾದ ನಡವಳಿಕೆ. ನಾಡಿನ ಬರಹಗಾರಗಾರರು, ಚಿಂತಕರುಗಳಿಗೆ ಬಹಿರಂಗವಾಗಿ ಜೀವ ಬೆದರಿಕೆ ಪತ್ರಗಳನ್ನು ಬರೆದರೂ ಸರ್ಕಾರ ಸುಮ್ಮನಿದೆಯೆಂದರೆ ಭಿನ್ನಮತ ಮತ್ತು ಭಿನ್ನ ಧ್ವನಿಗಳನ್ನು ದಮನಿಸಲು ಪ್ರಯತ್ನಿಸಲಾಗುತ್ತಿದೆ ಅಥವಾ ಪೊಲೀಸ್ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದರ್ಥ.
ರಾಶಿಗಳಿಗೆ ಅನುಗುಣವಾಗಿ ಗುರು ಪೂರ್ಣಿಮೆಯ ದಿನ ವಿಶೇಷ ದಾನ:
ಅತ್ಯಂತ ಆಧುನಿಕ ವ್ಯವಸ್ಥೆ ಇದ್ದರೂ ದುರುಳರನ್ನು ಪತ್ತೆ ಹಚ್ಚದೆ ಸರ್ಕಾರ ನಿಷ್ಕ್ರಿಯವಾಗಿದೆ. ಈಗಾಗಲೆ ನಾಡಿನ ಪ್ರಖ್ಯಾತ ಚಿಂತಕರು ಹಾಗೂ ಬಸವ ತತ್ವದ ಅನುಯಾಯಿಗಳಾಗಿದ್ದ ಡಾ.ಎಂ.ಎಂ ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಅವರನ್ನು ಇದೇ ಗೋಡ್ಸೆ ಸಂತತಿಯವರು ಹಾಗೂ ಮನು ಸಂಸ್ಕೃತಿಯ ಪ್ರತಿಪಾದಕರುಗಳು ಗುಂಡಿಟ್ಟು ಕೊಂದರು. ಕೊಲೆಗಾರರಲ್ಲಿ ಬಹುತೇಕರು ಬಿಜೆಪಿಯನ್ನು ಬೆಂಬಲಿಸುವ ಸನಾತನ ಸಂಸ್ಕೃತಿಯೆಂಬ ಸಂಘಟನೆಯ ಸದಸ್ಯರುಗಳಾಗಿದ್ದಾರೆಂಬ ಮಾಹಿತಿ ಇದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ