Trending

ವಿಪಕ್ಷ ನಾಯಕ ಸಿದ್ಧು, ಪ್ರಗತಿಪರ ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ – DGP ಗೆ ದೂರು

ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರಿಗೆ ಜೀವ ಬೆದರಿಕೆ ಪತ್ರ ಬಂದಿದೆ. ಈ ಬಗ್ಗೆ ಡಿಜಿ-ಐಜಿಪಿಗೆ ಸಿದ್ದು ಮಾಹಿತಿ ನೀಡಿದ್ದಾರೆ.

ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದು ಅವರು, ರಾಜ್ಯದ ಬರಹಗಾರರು, ಚಿಂತಕರು ಮತ್ತು ವಿರೋಧ ಪಕ್ಷದ ನಾಯಕರುಗಳಿಗೆ ಪದೇ ಪದೇ ಜೀವ ಬೆದರಿಕೆಯ ಪತ್ರಗಳನ್ನು ದಾವಣಗೆರೆ, ಭದ್ರಾವತಿ, ಅಜ್ಜಂಪುರ ಮುಂತಾದ ಊರುಗಳಿಂದ ಪೋಸ್ಟ್ ಮಾಡಲಾಗುತ್ತಿದೆ.

ಕುಂ. ವೀರಭದ್ರಪ್ಪನವರಿಗೆ 6 ಪತ್ರ, ಬಂಜಗೆರೆ ಜಯಪ್ರಕಾಶ್ ಅವರಿಗೆ 5 ಪತ್ರ, ಬಿ.ಟಿ.ಲಲಿತಾ ನಾಯಕ್, ಬಿ.ಎಲ್ ವೇಣು, ಚಂದ್ರಶೇಖರ್ ತಾಳ್ಯ ಅವರಿಗೆ ತಲಾ 2 ಪತ್ರ, ಎಸ್.ಜಿ ಸಿದ್ದರಾಮಯ್ಯ ಮತ್ತು ವಸುಂಧರ ಭೂಪತಿಯವರುಗಳಿಗೆ ಒಂದೊಂದು ಪತ್ರಗಳನ್ನು ಬರೆಯಲಾಗಿದೆ.

ಗುರು ಪೂರ್ಣಿಮಾ ಮಹತ್ವ

ಇವರುಗಳೆಲ್ಲರೂ ಪ್ರಜಾತಾಂತ್ರಿಕ ಮೌಲ್ಯ ಹಾಗೂ ಸಂವಿಧಾನದ ಆಶಯಗಳನ್ನು ರಕ್ಷಿಸುವ ಸಲುವಾಗಿ ಹೋರಾಡುತ್ತಿದ್ದಾರೆ. ಹಾಗಾಗಿ ಹಲವು ಬಾರಿ ಆಡಳಿತಾರೂಢ ಸರ್ಕಾರದ ವಿರುದ್ಧ ಮಾತನಾಡಲೇಬೇಕಾಗುತ್ತದೆ. ಇದಿಷ್ಟನ್ನೂ ಸಹಿಸದ ಕಿಡಿಗೇಡಿಗಳು ಜೀವ ಬೆದರಿಕೆಗಳನ್ನು ಒಡ್ಡುವ ಹೀನ ಕೆಲಸ ಮಾಡುತ್ತಿದ್ದಾರೆ. ಅನೇಕ ಸಾರಿ ನನ್ನ ಸೋಷಿಯಲ್ ಮೀಡಿಯಾ ಖಾತೆಗಳಿಗೂ ಬಂದು ಹೀನಮನೋವೃತ್ತಿ ತೋರುವವರೂ ಇದ್ದಾರೆ ಎಂದಿದ್ದಾರೆ

ನನಗೂ ಹಲವು ಬೆದರಿಕೆ ಪತ್ರಗಳು ಬಂದಿವೆ. ಸ್ವತಃ ಡಿಜಿಯವರಿಗೆ ನಾನು ಈ ಕುರಿತು ಮಾತನಾಡಿದ್ದೆ. ಇತ್ತೀಚೆಗೆ ಟಿವಿಯೊಂದರಲ್ಲಿ ವೀರೇಶ್ ಎಂಬಾತ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ನನಗೆ ಗುಂಡು ಹಾರಿಸಬೇಕೆಂದು ಹೇಳಿಕೆ ಕೊಟ್ಟಿದ್ದ. ಈ ಬೆದರಿಕೆಯ ಹೇಳಿಕೆ ಹಾಗೂ ಪತ್ರಗಳ ಕುರಿತು ದೂರು ದಾಖಲಿಸಲಾಗಿದೆ.

ಆದರೂ ಇದುವರೆಗೆ ಸರ್ಕಾರ ಎಫ್‍ಐಆರ್ ದಾಖಲಿಸಿಲ್ಲ. ಇದೇ ವಿಷಯಕ್ಕೆ ಹಲವು ಬಾರಿ ದೂರು ದಾಖಲಿಸಿದರೂ ಎಫ್‍ಐಆರ್ ಮಾಡಿ ತನಿಖೆ ನಡೆಸದಿರುವುದು ಸರ್ಕಾರದ ಬೇಜವಾಬ್ಧಾರಿಯುತವಾದ ನಡವಳಿಕೆ. ನಾಡಿನ ಬರಹಗಾರಗಾರರು, ಚಿಂತಕರುಗಳಿಗೆ ಬಹಿರಂಗವಾಗಿ ಜೀವ ಬೆದರಿಕೆ ಪತ್ರಗಳನ್ನು ಬರೆದರೂ ಸರ್ಕಾರ ಸುಮ್ಮನಿದೆಯೆಂದರೆ ಭಿನ್ನಮತ ಮತ್ತು ಭಿನ್ನ ಧ್ವನಿಗಳನ್ನು ದಮನಿಸಲು ಪ್ರಯತ್ನಿಸಲಾಗುತ್ತಿದೆ ಅಥವಾ ಪೊಲೀಸ್ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದರ್ಥ.

ರಾಶಿಗಳಿಗೆ ಅನುಗುಣವಾಗಿ ಗುರು ಪೂರ್ಣಿಮೆಯ ದಿನ ವಿಶೇಷ ದಾನ:

ಅತ್ಯಂತ ಆಧುನಿಕ ವ್ಯವಸ್ಥೆ ಇದ್ದರೂ ದುರುಳರನ್ನು ಪತ್ತೆ ಹಚ್ಚದೆ ಸರ್ಕಾರ ನಿಷ್ಕ್ರಿಯವಾಗಿದೆ. ಈಗಾಗಲೆ ನಾಡಿನ ಪ್ರಖ್ಯಾತ ಚಿಂತಕರು ಹಾಗೂ ಬಸವ ತತ್ವದ ಅನುಯಾಯಿಗಳಾಗಿದ್ದ ಡಾ.ಎಂ.ಎಂ ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಅವರನ್ನು ಇದೇ ಗೋಡ್ಸೆ ಸಂತತಿಯವರು ಹಾಗೂ ಮನು ಸಂಸ್ಕೃತಿಯ ಪ್ರತಿಪಾದಕರುಗಳು ಗುಂಡಿಟ್ಟು ಕೊಂದರು. ಕೊಲೆಗಾರರಲ್ಲಿ ಬಹುತೇಕರು ಬಿಜೆಪಿಯನ್ನು ಬೆಂಬಲಿಸುವ ಸನಾತನ ಸಂಸ್ಕೃತಿಯೆಂಬ ಸಂಘಟನೆಯ ಸದಸ್ಯರುಗಳಾಗಿದ್ದಾರೆಂಬ ಮಾಹಿತಿ ಇದೆ.

Team Newsnap
Leave a Comment
Share
Published by
Team Newsnap

Recent Posts

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024