ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಸಂಖ್ಯೆ ಜೋಡಣೆ ಮಾಡಿ: ಎಡಿಸಿ ನಾಗರಾಜು

Team Newsnap
2 Min Read
Link Aadhaar Card Number to Voter ID Card: ADC Nagaraju ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಸಂಖ್ಯೆ ಜೋಡಣೆ ಮಾಡಿ: ಎಡಿಸಿ ನಾಗರಾಜು

ಜಿಲ್ಲೆಯಲ್ಲಿ 14 ಲಕ್ಷಕ್ಕೂ ಹೆಚ್ಚಿನ ಮತದಾರರಿದ್ದಾರೆ. ಮತದಾರರು ತಮ್ಮ ಚುನಾವಣಾ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆಯನ್ನು ಮಾಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಹೆಚ್ .ಎಲ್ ನಾಗರಾಜು ರವರು ತಿಳಿಸಿದರು

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರದ ಗುರುತಿನ ಚೀಟಿ ಸಂಖ್ಯೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಕುರಿತು ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.ಇದನ್ನು ಓದಿ –ಸ್ವಗ್ರಾಮದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ 50 ಲಕ್ಷ ರು ದೇಣಿಗೆ ಕೊಟ್ಟ ನಿರ್ದೇಶಕ ಪ್ರಶಾಂತ್ ನೀಲ್​

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕಚೇರಿಯ ಸಿಬ್ಬಂದಿಗಳು ತಮ್ಮ ಚುನಾವಣೆ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿಸಿಕೊಳ್ಳಬೇಕು. ತಮ್ಮ ವ್ಯಾಪ್ತಿಯಲ್ಲಿ ಬರುವ ಫಲಾನುಭವಿಗಳಿಗೆ ಆಧಾರ್ ಜೋಡಣೆ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್ ಗಳು, ಕಾರ್ಯನಿರ್ವಾಹಕ ಅಧಿಕಾರಿಗಳ ಹಂತದಲ್ಲಿ ಸಭೆಯನ್ನು ನಡೆಸಿ ಚುನಾವಣೆ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಜೋಡಣೆ ಕುರಿತು ಮಾಹಿತಿ ನೀಡಿ ವರದಿ ಸಲ್ಲಿಸಬೇಕು ಎಂದರು.

ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮತದಾರರ ಗುರುತಿನ ಚೀಟಿ ಗೆ ಆಧಾರ್ ಜೋಡಣೆ ಕುರಿತು ಮಾಹಿತಿ ನೀಡಿ ವಿದ್ಯಾರ್ಥಿಗಳು ಹಾಗೂ ಅವರ ಮನೆಗಳಲ್ಲೂ ಸಹ ಆಧಾರ್ ಕಾರ್ಡ್ ಜೋಡಣೆ ಮಾಡುವಂತೆ ತಿಳಿಸಬೇಕು ಎಂದರು.

ಆಧಾರ್ ಜೋಡಣೆಯ ಬಗ್ಗೆ ಆಂದೋಲನ ನಡೆಸಿ

ಜಿಲ್ಲೆಯಲ್ಲಿನ ನ್ಯಾಯಬೆಲೆ ಅಂಗಡಿಗಳಲ್ಲಿ ಬರುವಂತಹ ಪಡಿತರ ಚೀಟಿದಾರರು, ಮಹಿಳಾ ಸಂಘಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸಾರ್ವಜನಿಕರಿಗೆ ಹಾಗೂ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಗರುಡಾ ಆ್ಯಪ್, ವಾಟರ್ ಹೆಲ್ಪ್ ಲೈನ್ ಆ್ಯಪ್ ಗಳ ಬಗ್ಗೆ ಮಾಹಿತಿ ನೀಡಿ ಮೊಬೈಲ್ ನಲ್ಲಿ ಸುಲಭವಾಗಿ ಜೋಡಣೆ ಕೆಲಸ ಮಾಡಬಹುದು ಎಂದರು.

ಆ್ಯಪ್ ಬಳಸಲು ಬರುವುದಿಲ್ಲ ಎಂದರೆ ಬಿ.ಎಲ್.ಒ ಗಳಿಗೆ ಆಧಾರ್ ಸಂಖ್ಯೆ ಜೋಡಣೆಗೆ ಒಪ್ಪಿಗೆ ಪತ್ರ ನೀಡಿದರೆ ಅವರು ಜೋಡಣೆ ಮಾಡಿಕೊಡುತ್ತಾರೆ. ಇಲಾಖೆಗಳು ಈ ಕುರಿತಂತೆ ಗುರಿ ನಿಗದಿಪಡಿಸಿಕೊಂಡು ಉತ್ತಮ‌ ಸಾಧನೆ ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ಮಂಡ್ಯ ವಿ.ವಿ ಕುಲಸಚಿವರಾದ ಡಾ.ನಾಗರಾಜ್ ಜಿ ಚೊಳ್ಳಿ, ಉಪವಿಭಾಗಾಧಿಕಾರಿ ಆರ್.ಐಶ್ವರ್ಯ,ಜಿ. ಪಂ. ಉಪ ಕಾರ್ಯದರ್ಶಿ ಸಂಜೀವಪ್ಪ, ತಹಶೀಲ್ದಾರ್ ಕುಂಇ ಅಹಮದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಮ ಮೂರ್ತಿ, ಜಿಲ್ಲಾಧಿಕಾರಿಗಳ ಕಚೇರಿಯ ಹಿರಿಯ ಸಹಾಯಕರಾದ ಸ್ವಾಮಿಗೌಡ, , ಜಿಲ್ಲಾ ವಾರ್ತಾಧಿಕಾರಿ ಎಸ್ .ಹೆಚ್. ನಿರ್ಮಲ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a comment