ಮೂರು‌ ದಿನಗಳ ಕಾಲ ರಾಜ್ಯದಲ್ಲಿ ಮದ್ಯಪಾನ ನಿಷೇಧ : ಅಬಕಾರಿ ಇಲಾಖೆ ಆದೇಶ

Team Newsnap
1 Min Read

ಸೋಮವಾರ ಸಂಜೆ 6 ಗಂಟೆಯಿಂದ ಮೂರು‌ ದಿನಗಳ ಕಾಲ ರಾಜ್ಯದಲ್ಲಿ ಮದ್ಯಪಾನ ನಿಷೇಧಿಸಲಾಗಿದೆ. ಹೀಗಾಗಿ ಮದ್ಯ ಮಾರಾಟ ಸ್ಥಗಿತಗೊಳ್ಳಲಿದೆ ಚುನಾವಣಾ ಆಯೋಗ ಹಾಗೂ ಅಬಕಾರಿ ಇಲಾಖೆ ಆದೇಶ ಹೊರಡಿಸಿದೆ. ಮದ್ಯ ಮಾರಾಟ ಮತ್ತು ಸಾಗಣೆಗೆ ನಿಷೇಧ ಜಾರಿಯಾಗಲಿದೆ. ಮೇ 9, 10, 13 ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌ ಆಗಲಿದೆ.

ಮತ ಎಣಿಕೆ ದಿನವೂ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಮೇ 13ರಂದು ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಮದ್ಯದಂಗಡಿಗಳು ಬಂದ್‌ ಆಗಲಿವೆ.

ಮತದಾನ ಮುಕ್ತಾಯಕ್ಕೆ ನಿಗದಿಪಡಿಸಿದ ದಿನಾಂಕದ 48 ಗಂಟೆಗಳ ಮುನ್ನ ಅವಧಿಯಲ್ಲಿಅಂದರೆ, ಮೇ 8 ರ ಸಂಜೆ 5 ರಿಂದ 10ರ ಮಧ್ಯರಾತ್ರಿ 12 ಗಂಟೆವರೆಗೆ ಎಲ್ಲ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ಮಳಿಗೆಗಳಲ್ಲಿ ಮದ್ಯ ಮಾರಾಟ ಮತ್ತು ಪೂರೈಕೆ ನಿಷೇಧಿಸಲಾಗಿದೆ. ಈ ಕುರಿತು ಆಯಾ ಜಿಲ್ಲಾಧಿಕಾರಿಗಳು ಪ್ರತ್ಯೇಕ ಆದೇಶ ಹೊರಡಿಸಿದ್ದಾರೆ.

Share This Article
Leave a comment