ವಿದ್ಯಾರ್ಥಿಗಳಿಗೆ ಮದ್ಯ ಸರಬರಾಜು : ರಾಜಧಾನಿಯ 510 ಪಬ್, ಬಾರ್‌ಗಳ ಮೇಲೆ ಸಿಸಿಬಿ ದಾಳಿ

Team Newsnap
1 Min Read

ಬೆಂಗಳೂರು: ವಿದ್ಯಾರ್ಥಿಗಳಿಗೆ ಮದ್ಯ ಸರಬರಾಜು ಮಾಡುತ್ತಿದ್ದ ಆರೋಪದ ಹಿನ್ನೆಲೆ ಬೆಂಗಳೂರಿನ 510 ಪಬ್, ಬಾರ್, ಹುಕ್ಕಾಬಾರ್‌ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.

ಶಾಸಕರ ಸಂಬಂಧಿಕರು ಎಂದು ಹೇಳಿಕೊಂಡಿರುವ ಕೆಲವು ಅಪ್ರಾಪ್ತರು ರೇಡ್ ವೇಳೆ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ.

ಬೆಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನ 510 ಕ್ಕೂ ಹೆಚ್ಚು ಪಬ್, ಬಾರ್, ಹುಕ್ಕಾಬಾರ್‌ಗಳ ಮೇಲೆ ದಾಳಿ ನಡೆಸಿದರು.

ದಾಳಿ ವೇಳೆ ಅಬಕಾರಿ ನಿಯಮ ಸೇರಿದಂತೆ ಕಾನೂನುಗಳನ್ನು ಉಲ್ಲಂಘನೆ ಮಾಡುತ್ತಿದ್ದ ಆರೋಪದ ಮೇಲೆ ಕೆಲ ಪಬ್‌ಗಳ ಮೇಲೆ ಕೇಸ್ ಹಾಕಲಾಗಿದೆ.

ಇತ್ತೀಚೆಗೆ ಶಾಲಾ ಮುಖ್ಯಸ್ಥರು ಪೊಲೀಸ್ ಆಯುಕ್ತರಿಗೆ ಮನವಿಯೊಂದನ್ನು ಕೊಟ್ಟಿದ್ದರು. ಅಪ್ರಾಪ್ತ ವಿದ್ಯಾರ್ಥಿಗಳಿಗೆ ಮದ್ಯ ನೀಡಲಾಗುತ್ತಿದೆ. ಇದನ್ನು ಸರಿಪಡಿಸುವಂತೆ ಕೇಳಿಕೊಂಡಿದ್ದರು. ಈ ಬಗ್ಗೆ ಕಮಿಷನರ್ ಅವರಿಂದ ನಿರ್ದೇಶನ ಪಡೆದು ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿ, ತಪಾಸಣೆ ನಡೆಸಿ ನಿಯಮ ಉಲ್ಲಂಘನೆ ಆಗುತ್ತಿರುವುದನ್ನು ಪತ್ತೆ ಮಾಡಿದ್ದಾರೆ.

ಅನಧಿಕೃತವಾಗಿ ಪಬ್‌ಗಳಲ್ಲಿ ಧೂಮಪಾನಕ್ಕೆ ಅವಕಾಶ ಕೊಡಲಾಗಿದೆ. ಪ್ರತಿ ಪಬ್‌ಗಳಲ್ಲಿ ಧೂಮಪಾನಕ್ಕೆ ಪ್ರತ್ಯೇಕ ರೂಂ ವ್ಯವಸ್ಥೆ ಇರಬೇಕು. ಇದಲ್ಲದೆ ಅಬಕಾರಿ ನಿಯಮಗಳನ್ನು ಸಹ ಉಲ್ಲಂಘನೆ ಮಾಡಿದ್ದಾರೆ. ಅಪ್ರಾಪ್ತರಿಗೆ ಮದ್ಯ ನೀಡುತ್ತಿರೋದು ಕಂಡುಬಂದಿದ್ದು, ಜುವೆನಿಲ್ ಜಸ್ಟಿಸ್ ಆಕ್ಟ್ ಹಾಗೂ ಕೋಪ್ಟಾ ಆಕ್ಟ್ ಅಡಿ ಕೇಸ್ ದಾಖಲಿಸಿಕೊಳ್ಳಲಾಗಿದೆ.ಜೆಡಿಎಸ್ – ಬಿಜೆಪಿ ಮೈತ್ರಿ : ಇನ್ನೂ ಆರಂಭಿಕ ಹಂತ – ಎಚ್ ಡಿ ಕೆ

ಬಾಣಸವಾಡಿಯ ಪಬ್ ಒಂದರಲ್ಲಿ ಕಿರುತೆರೆ ನಟಿಯರು ಎಂದು ಹೇಳಿಕೊಂಡ ಅಪ್ರಾಪ್ತೆಯರು ಮದ್ಯ ಸೇವನೆ ವೇಳೆ ಸಿಸಿಬಿ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ. ನಾವು ಮಾಜಿ ಸಚಿವ, ಹಾಲಿ ಶಾಸಕರ ಸಂಬಂಧಿಕರು ಅಂತಾ ವಾಗ್ವಾದ ನಡೆಸಿದ್ದಾರೆ.

Share This Article
Leave a comment