ಬೆಳಗಾವಿ: ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಈಗಿನ ಮಾಹಿತಿ ಪ್ರಕಾರ ಆಯಾ ಚುನಾವಣೆಗಳು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಲಿವೆ.
ಚುನಾವಣೆ ದಿನಾಂಕ:
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಯನ್ನು ಏಪ್ರಿಲ್ ಒಳಗೆ ನಡೆಸಲಾಗುವುದು. ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನು ಏಪ್ರಿಲ್ ಮತ್ತು ಮೇ ತಿಂಗಳ ಒಳಗೆ ಪೂರ್ಣಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗ ತೀರ್ಮಾನಿಸಿದೆ.
ಆಯೋಗದ ಮಾಹಿತಿ:
ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶಿ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣಾ ಆಯೋಗ ಈಗಾಗಲೇ ಚುನಾವಣೆಗಳಿಗೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದು, ಜಿಲ್ಲೆಯ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮತದಾರರ ಪಟ್ಟಿ ಹಾಗೂ ಮೀಸಲಾತಿ ಪಟ್ಟಿ ಪರಿಶೀಲನೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
ಮತದಾರರ ಪಟ್ಟಿ ಹಾಗೂ ವೇಳಾಪಟ್ಟಿ:
ಅಂತಿಮ ಮತದಾರರ ಪಟ್ಟಿ ಮತ್ತು ಮೀಸಲಾತಿ ಪಟ್ಟಿ ಸಿದ್ಧವಾದ ಬಳಿಕ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಯ ವೇಳಾಪಟ್ಟಿ ಅಧಿಕೃತವಾಗಿ ಪ್ರಕಟಿಸಲಾಗುವುದು.ಇದನ್ನು ಓದಿ –ರಸ್ತೆ ಅಪಘಾತ ಸಂತ್ರಸ್ತರಿಗೆ ನೆರವಾದವರಿಗೆ ₹25,000 ಬಹುಮಾನ: ಕೇಂದ್ರ ಸರ್ಕಾರ
ಈ ಬಾರಿಯ ಚುನಾವಣೆಯಿಂದ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜನರ ಪ್ರಾತಿನಿಧ್ಯವನ್ನು ಬಲಪಡಿಸಲು ಹೊಸ ರಚನೆಗಳು ಜಾರಿಗೆ ಬರಲಿವೆ.
More Stories
ತಿರುಪತಿ ದೇವಾಲಯದಲ್ಲಿ ಬೆಂಕಿ ಅವಘಡ: ಲಡ್ಡು ವಿತರಣಾ ಕೌಂಟರ್ನಲ್ಲಿ ಶಾರ್ಟ್ ಸರ್ಕ್ಯೂಟ್
ರಸ್ತೆ ಅಪಘಾತ ಸಂತ್ರಸ್ತರಿಗೆ ನೆರವಾದವರಿಗೆ ₹25,000 ಬಹುಮಾನ: ಕೇಂದ್ರ ಸರ್ಕಾರ
ರಾಜ್ಯದ ಈ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ