ಕೋವಿಡ್ ಸೋಂಕನ್ನು ಸಂಪೂರ್ಣವಾಗಿ ನಿಯಂತ್ರಿಸಲು ಜೂನ್ 7ರವರೆಗೆ ಜಾರಿ ಮಾತ್ರ ಮಾಡಲಾಗಿದ್ದ ಲಾಕ್ ಡೌನ್ ಅನ್ನು ಮುಂದಿನ ಒಂದು ವಾರ ಅಂದರೆ ಜೂನ್ 14 ರ ವರೆಗೆ ಮುಂದುವರೆಸುವುದಾಗಿ ಸಿ ಎಂ ಯಡಿಯೂರಪ್ಪ ಘೋಷಣೆ ಮಾಡಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಯಡಿಯೂರಪ್ಪ, ಆರೋಗ್ಯ ತಜ್ಞರ ಸಲಹೆಯ ಮೇರೆಗೆ ಲಾಕ್ ಡೌನ್ ಮುಂದುವರೆಸೋದು ಸೂಕ್ತ ಎಂಬ ನಿರ್ಧಾರ ಮಾಡಲಾಗಿದೆ. ಅಲ್ಲದೆ 500 ಕೋಟಿ ರು ವಿಶೇಷ ಎರಡನೇ ಪ್ಯಾಕೇಜ್ ಘೋಷಣೆ ಮಾಡಲಾಗುತ್ತಿದೆ. ಜೂನ್ 7 ರಿಂದ ಶೇ.30ರಷ್ಟು ಕೋವಿಡ್ ವರ್ತನೆ ಪಾಲಿಸಿ ತೆರೆಯಲು ಅನುಮತಿಸಲಾಗಿದೆ ಎಂದರು.
ಕೋವಿಡ್ ಪ್ಯಾಕೇಜ್ -2 : ಯಾರಿಗೆ ನೆರವು –
- ಪವರ್ ಲೂಮ್ ನೇಕಾರರಿಗೆ ಇಬ್ಬರು ಕೆಲಸಗಾರರಿಗೆ ಮೂರದಂತೆ 3 ಸಾವಿರ ರು ಪರಿಹಾರ.
- ಚಲನ ಚಿತ್ರ, ದೂರ ದರ್ಶನ, ಮಾಧ್ಯಮ ಅಸಂಘಟಿತ ಕಾರ್ಮಿಕರಿಗೆ 3 ಸಾವಿರ ರು.
- ಮೀನುಗಾರರಿಗೆ ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ನೊಂದಾಯಿಸಿದಂತಹ ಮೀನುಗಾರರಿಗೆ ತಲಾ 3 ಸಾವಿರ ರು.
- ಇನ್ ಲ್ಯಾಂಡ್ ದೋಣಿ ಮಾಲೀಕರಿಗೆ3 ಸಾವಿರ ರು
*ಮುಜುರಾಯಿ ದೇವಸ್ಥಾನದ ಅರ್ಚಕರು, ಸಿಬ್ಬಂದಿಗಳಿಗೆ ಸಿ ವರ್ಗದ ದೇವಸ್ಥಾನದಲ್ಲಿ ಕೆಲಸ ಮಾಡುವಂತ ತಲಾ 3 ಸಾವಿರ ರು.
- ಮಸೀದಿಯಲ್ಲಿನ ಪೇಜಿಸಿಮೋಗಳಿಗೂ ತಲಾ 3 ಸಾವಿರ ರು
- ಆಶಾ ಕಾರ್ಯಕರ್ತರು ಕೂಡ ಕೊರೋನಾ ನಿಯಂತ್ರಣದಲ್ಲಿ ಕೆಲಸ ಮಾಡುವವರಿಗೆ 3 ಸಾವಿರ ರು. (42574 ಕಾರ್ಯಕರ್ತೆಯರಿಗೆ ಸಹಾಯ ಆಗಲಿದೆ.)
- ಅಂಗನವಾಡಿ ಕಾರ್ಯಕರ್ತೆಯರಿಗೆ 2 ಸಾವಿರ ರು.
- ಎಲ್ಲಾ ಶಾಲೆಗಳು ಮುಚ್ಚಿದ್ದರೂ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ.
- ಅನುಧಾನ ರಹಿತ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ 5 ಸಾವಿರ ಪರಿಹಾರ.
- ನ್ಯಾಯವಾಧಿಗಳ ಕಲ್ಯಾಣ ನಿಧಿಗೆ 5 ಕೋಟಿ ರು.
- ಕೈಗಾರಿಕೆಗಳಿಗೆ ಜೂನ್ 2021 ನಿಗದಿತ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
- ಎಂಎಸ್‌ಎಂಇ ಕೈಗಾರಿಕೆ ಹೊರತುಪಡಿಸಿ, ಇತರೆ ಕೈಗಾರಿಕೆಗಳ ಗ್ರಾಹಕರಿಗೆ ಮೇ, ಜೂನ್ ತಿಂಗಳ ವಿದ್ಯುತ್ ಶುಲ್ಕ ಪಾವತಿಯಿಂದ ಜುಲೈ 30ರವರೆಗೆ ವಿನಾಯ್ತಿ ನೀಡಲಾಗಿದೆ
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ