Categories: Main News

ರಾಜ್ಯದಲ್ಲಿ ಲಾಕ್​ಡೌನ್ ಸಡಿಲಿಕೆ – 11 ಜಿಲ್ಲೆಗಳಲ್ಲಿ ಲಾಕ್​ಡೌನ್​ ಮುಂದುವರಿಕೆ – ಸಿಎಂ ಪ್ರಕಟ

ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್​ಡೌನ್ ಜೂನ್ 21 ರವರೆಗೆ ಮುಂದುವರೆಯಲಿದೆ. ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಲಾಕ್​ಡೌನ್ ಸಡಿಲಿಕೆ ಮಾಡಲಾಗುತ್ತಿದೆ ಎಂದು ಸಿಎಂ‌ ಯಡಿಯೂರಪ್ಪ ಗುರುವಾರ ರಾತ್ರಿ ಪ್ರಕಟಿಸಿದರು.

ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ಹಿನ್ನೆಲೆ ಲಾಕ್​ಡೌನ್​ ಮುಂದುವರೆಸಬೇಕೆ ಅಥವಾ ಸಡಿಲ ಮಾಡಬೇಕೆ ಎಂಬ ವಿಷಯವಾಗಿ ಸಿಎಂ ನೇತೃತ್ವದಲ್ಲಿ ಸಭೆ ನಡೆಯಿತು.

ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಅನ್ ಲಾಕ್ ಸಂಬಂಧಿಸಿದಂತೆ ಮುಖ್ಯ ಮಾಹಿತಿ ನೀಡಿದರು.

  • 11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಈಗಿರುವ ನಿರ್ಬಂಧಗಳಲ್ಲಿ ಸಡಿಲಿಕೆ.
  • ಉಳಿದ ಜಿಲ್ಲೆಗಳಲ್ಲಿ ಜೂನ್ 14 ರಿಂದ ಸಡಿಲಿಕೆ ಜಾರಿ.
  • ಈ ಜಿಲ್ಲೆಗಳಲ್ಲಿ ಎಲ್ಲಾ ಕಾರ್ಖಾನೆ ತೆರೆಯಲು ಅವಕಾಶವಿದೆ. ಆದರೆ ಶೇ 50 ರಷ್ಟು ಸಿಬ್ಬಂದಿಗೆ ಮಾತ್ರ ಅವಕಾಶ.
  • ಗಾರ್ಮೆಂಟ್​ಗಳಲ್ಲಿ ಮಾತ್ರ ಕೇವಲ ಶೇ. 30 ರಷ್ಟು ಸಿಬ್ಬಂದಿಗೆ ಅವಕಾಶ.
  • ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ.
  • ನಿರ್ಮಾಣಕ್ಕೆ ಸಂಬಂಧಿಸಿದ ಅಂಗಡಿಗಳಿಗೆ ತೆರೆಯಲು ಅವಕಾಶ.
Team Newsnap
Leave a Comment
Share
Published by
Team Newsnap

Recent Posts

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024