11:12 AM: ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರ ವಿರುದ್ಧವಾಗಿ ಡಾ, ಮಂಜುನಾಥ್ ಅವರು 1,15,945 ಮತಗಳ ಅಂತರಿಂದ ಮುನ್ನಡೆ ಸಾಧಿಸಿದ್ದಾರೆ.
11:11 AM: ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ 300174 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಡಾ.ಅಂಜಲಿ ನಿಂಬಾಳಕರ್ 159355 ಮಗಳನ್ನು ಪೊಡೆದು ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿ 140819 ಮತಗಳ ಅಂತರದಿಂದ ಮುನ್ನಡೆ ಪಡೆದುಕೊಂಡಿದೆ.
10:46 AM: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಾ. ಸಿ ಮಂಜುನಾಥ್ ಅವರು 90 ಸಾವಿರ ಮತಗಳ ಅಂತರದಿಂದ ಭಾರಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಡಿ,ಕೆ ಸುರೇಶ್ ಅವರು ಭಾರಿ ಹಿನ್ನಡೆ ಪಡೆದಿದ್ದಾರೆ.
10:45 AM: ಬೆಳಗಾವಿಯ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮೃಣಾಲ್ ಅವರು ಭಾರಿ ಮತಗಳ ಅಂತರದಿಂದ ಹಿನ್ನೆಡೆ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೇಸರಗೊಂದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಗ ಮೃಣಾಲ್ ಅವರು ಬೇಸರಿಂದ ಮತಗಟ್ಟೆಯಿಂದ ಹೊರ ಬಂದಿದ್ದಾರೆ.
10:40 AM: ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತ ಎಣಿಕೆಯಲ್ಲಿ ಬಿಎಸ್ಪಿ 5634 ಮತಗಳನ್ನು ಪಡೆದು ಮುಂದಕ್ಕೆ ಹೆಜ್ಜೆ ಇಟ್ಟಿದೆ. ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್- 272743, ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ 215996 ಮತಗಳನ್ನು ಪಡೆದುಕೊಂಡಿದ್ದಾರೆ. ಮತ ಎಣಿಕೆ ಮುಂದುವರೆದಿದೆ.
10:27 AM: ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ 4 ಸುತ್ತುಗಳ ಮತ ಏಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ 1,44,617 ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ 1,40,024. ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ 4594 ಮತಗಳ ಮುನ್ನಡೆ ಸಾಧಿಸಿದ್ದಾರೆ.
10:15 AM: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾರಿ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಯದುವೀರ್ 1,97,069 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ 1,48,751 ಮತಗಳನ್ನು ಪಡೆದಿದ್ದಾರೆ. ಯದುವೀರ್ ಒಟ್ಟು 48,318 ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ.
10:5 AM: ಉತ್ತರ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ- 170985 ಮತಗಳಿಂದ ಮುನ್ನಡೆ ಸಾಧಿಸಿದರೆ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳಕರ್ 89005 ಮತಗಳಿಂದ ಹಿನ್ನಡೆಯಾಗಿದ್ದಾರೆ.
10:02 AM: ತುಮಕೂರು ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ 117215 ಮತ. ಎಸ್.ಪಿ.ಮುದ್ದಹನುಮೇಗೌಡಗೆ 92494 ಮತವಿ.ಸೋಮಣ್ಣಗೆ 24721 ಮತ ಮುನ್ನಡೆ ಸಾಧಿಸಿದ್ದಾರೆ
10:00 AM : ಚಿಕ್ಕಬಳ್ಳಾಪುರ ಅಭ್ಯರ್ಥಿ ಡಾ ಕೆ ಸುಧಾಕರ್ ಮುನ್ನಡೆ 22063 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
9:50 AM: ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಗಿಂತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ತುಕಾರಾಮ್ 34,425 ಮತಗಳಿಂದ ಮುನ್ನಡೆ ಪಡೆದಿದ್ದಾರೆ.
9:49 AM : ಚಿಕ್ಕೋಡಿಯಲ್ಲಿ ಐದನೇ ಸುತ್ತಿನಲ್ಲೂ ಕಾಂಗ್ರಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ 32,936 ಮತಗಳ ಭಾರಿ ಮುನ್ನೆಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಪ್ರಿಯಾಂಕಾ ಜಾರಕಿಹೊಳಿ 1,63,013 ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ 1,30,077 ಮತಗಳನ್ನು ಪಡೆದಿದ್ದಾರೆ.
9:44 AM: ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಗಿಂತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ತುಕಾರಾಮ್ 24,336 ಮತಗಳಿಂದ ಮುನ್ನಡೆ ಪಡೆದಿದ್ದಾರೆ. ಒಟ್ಟು ಕಾಂಗ್ರೆಸ್ ಅಭ್ಯರ್ಥಿ – 1,41,834 ಬಿಜೆಪಿ ಅಭ್ಯರ್ಥಿ ಶ್ರೀರಾಮುಲು -117,498 ಮತಗಳಗಳನ್ನು ಪಡೆದಿದ್ದಾರೆ.
9:33 AM : ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ 2744 ಮತಗಳಿಂದ ಮುನ್ನಡೆ. ಕಾಂಗ್ರೆಸ್ 38,640, ಬಿಜೆಪಿ35896 ಮತ.
9:31 AM : ಧಾರವಾಡದಲ್ಲಿ 10,351 ಮತಗಳ ಅಂತರದಿಂದ ಬಿಜೆಪಿಯ ಪ್ರಲ್ಹಾದ ಜೋಶಿ ಮುನ್ನಡೆ, ಕಾಂಗ್ರೆಸ್‌ನ ವಿನೋದ್ ಅಸೂಟಿಗೆ ಹಿನ್ನಡೆ
9:29 AM : ಉತ್ತರ ಪ್ರದೇಶದ ರಾಯಬರೇಲಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ 2126 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
9:24 AM: ಚಿಕ್ಕೋಡಿಯಲ್ಲಿ 4ನೇ ಸುತ್ತು ಮತ ಎಣಿಕೆ ಮುಕ್ತಾಯ, 20,753 ಮತಗಳಿಂದ ಪ್ರಿಯಾಂಕಾ ಮುನ್ನಡೆ
9:23 AM: ಹಾಸನದಲ್ಲಿ ಮೊದಲ ಸುತ್ತು ಮುಕ್ತಾಯ. ಜೆಡಿಎಸ್ ಗೆ 85593 ಮತ. ಕಾಂಗ್ರೆಸ್ ಗೆ 83117 ಮತ. 2476 ಮತಗಳ ಅಂತರದಿಂದ ಜೆಡಿಎಸ್ ಮುನ್ನಡೆ
9:22AM: ಹಿಮಾಚಲ ಪ್ರದೇಶದ ಹಮೀರ್‌ಪುರ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಅನುರಾಗ್ ಸಿಂಗ್ ಠಾಕೂರ್ 6492 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
9:21AM: ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ 8718 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
9:10 AM: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಮುನ್ನಡೆ ಸಾಧಿಸಿದ್ದಾರೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 40480 ಮತಗಳನ್ನು ಪಡೆದಿದ್ದರೆ. ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಎಸ್.ಬಾಲರಾಜ್ 35217 ಮತಗಳನ್ನು ಗಳಿಸಿದ್ದಾರೆ. ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು 5263 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
9:10 AM: ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಆರಂಭವಾಗಿದೆ. ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಗಿಂತ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ತುಕಾರಾಮ್ 3940 ಮತಗಳಿಂದ ಮುನ್ನಡೆ ಪಡೆದಿದ್ದಾರೆ. ಒಟ್ಟು ಕಾಂಗ್ರೆಸ್ – 38303, ಬಿಜೆಪಿ – 34363 ಮತಗಳ ಎಣಿಕೆಯಾಗಿದೆ.
9:05 AM: ಚಿತ್ರದುರ್ಗ ಲೋಕಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪಗೆ 32239 ಮತ, ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ್ ಗೆ 32164ಮತ. 75ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಮುನ್ನಡೆ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯ, ಕೈ ಅಭ್ಯರ್ಥಿಗೆ ಅಲ್ಪ ಮುನ್ನಡೆ.
9:01 :AM: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮುನ್ನಡೆ. ಎರಡನೇ ಸುತ್ತಿನಲ್ಲಿ 22590 ಮತ ಪಡೆದ ಕಾಗೇರಿ 1338 ಮತಗಳಿಂದ ಮುನ್ನಡೆ. ಕಾಂಗ್ರೆಸ್ ನ ಅಂಜಲಿ ನಿಂಬಾಳಕರ್ ಗೆ 9252. ಮತ
8:59AM:: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ 5344 ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ 21,006 ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ 26,350 ಮತಗಳನ್ನು ಪಡೆದಿದ್ದಾರೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ