ಮಂಡ್ಯ : ಮಂಡ್ಯದಿಂದ (Mandya) ಮೈತ್ರಿ ಅಭ್ಯರ್ಥಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಫಿಕ್ಸ್ ಆಗಿದೆ .
ಕುಮಾರಸ್ವಾಮಿ ಸ್ಪರ್ಧೆಯ ಬಗ್ಗೆ ಜೆಡಿಎಸ್ (JDS) ಕೋರ್ ಕಮಿಟಿ ಸಭೆಯಲ್ಲೂ ಚರ್ಚೆ ನಡೆದಿದ್ದು ,ಸಭೆಯಲ್ಲಿ ಹೆಚ್.ಡಿ.ಕೆ ಮಂಡ್ಯದಿಂದ ಸ್ಪರ್ಧೆ ಮಾಡಲು ಎಲ್ಲಾ ನಾಯಕರು ಒಪ್ಪಿಗೆ ನೀಡಿದ್ದಾರೆ.
ಬಿಜೆಪಿ ಹೈಕಮಾಂಡ್‌ನಿಂದಲೂ (BJP High Command) ಕುಮಾರಸ್ವಾಮಿ ಸ್ಪರ್ಧೆಗೆ ಸಮ್ಮತಿ ಸಿಕ್ಕಿದ್ದು ,ಮಾರ್ಚ್ 25ಕ್ಕೆ ಕುಮಾರಸ್ವಾಮಿ ಅಧಿಕೃತ ಅಭ್ಯರ್ಥಿ ಎಂದು ಘೋಷಣೆಯಾಗುವ ಸಾಧ್ಯವಿದೆ.ದಾಖಲೆಯಿಲ್ಲದೆ ಸಾಗಿಸುತ್ತಿದ್ದ 1 ಕೋಟಿ ಹಣ ಮಂಡ್ಯದಲ್ಲಿ ಜಪ್ತಿ !
ಇಂದು ಚೆನ್ನೈಗೆ ತೆರಳಿರುವ ಕುಮಾರಸ್ವಾಮಿ ಅವರಿಗೆ ಮಾರ್ಚ್ 21 ರಂದು ಆಪರೇಷನ್ ನಡೆಯಲಿದ್ದು ,ಆಪರೇಷನ್ ಮುಗಿಸಿದ ಬಳಿಕ ಮಂಡ್ಯದಲ್ಲಿ ಬೃಹತ್ ಸಭೆ ಆಯೋಜನೆಯಾಗಲಿದೆ.
More Stories
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ