ಬಿಬಿಎಂಪಿ ಅಧಿಕಾರಿ ಮನೆ ಮೇಲೆ ‘ಲೋಕಾ’ದಾಳಿ- ಪರಿಶೀಲನೆ

Team Newsnap
1 Min Read

ರಾಜ್ಯದ ಕೆಲ ಕಡೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರಿನ ಯಲಹಂಕದಲ್ಲಿರುವ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಅವರ ಮನೆ ಮೇಲೆ ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ.

ಅಕ್ರಮ ಆಸ್ತಿ ಗಳಿಕೆಯ ಆರೋಪದ ಮೇಲೆ ಎಸ್‌ಪಿ ಅಶೋಕ್ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿ ಗಂಗಾಧರಯ್ಯ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಒಬ್ಬರು ಎಸ್‌ಪಿ, ಇಬ್ಬರು ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್ ಸೇರಿದಂತೆ 15 ಜನ ಲೋಕಾಯುಕ್ತ ಅಧಿಕಾರಿಗಳ ತಂಡ ಮುಂಜಾನೆ 5 ಗಂಟೆಗೆ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದನ್ನು ಓದಿ –ಆಸ್ಪತ್ರೆಯಿಂದಲೇ ಪ್ರಚಾರದ ರೂಟ್ ಮ್ಯಾಪ್ ಸಿದ್ಧ : ಹೆಚ್‌ಡಿಕೆ

ಗಂಗಾಧರಯ್ಯ ಬಿಬಿಎಂಪಿ ಟೌನ್ ಪ್ಲಾನಿಂಗ್‌ನಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಗಂಗಾಧರಯ್ಯ ನಿವಾಸ, ಮನೆಯ ಆವರಣ, ಕಾರು ಸೇರಿದಂತೆ ಎಲ್ಲೆಡೆ ಪರಿಶೀಲನೆ ನಡೆಸುತ್ತಿದ್ದಾ.

Share This Article
Leave a comment