ಬೆಂಗಳೂರು, ಬಾಗಲಕೋಟೆ ಸೇರಿ ರಾಜ್ಯದ ವಿವಿಧೆಡೆ ಅಧಿಕಾರಿಗಳ ನಿವಾಸದ ಮೇಲೆ ಲೋಕಾ ದಾಳಿ

Team Newsnap
1 Min Read

ಬೆಂಗಳೂರು : ಭ್ರಷ್ಟಾಚಾರ ಆರೋಪ ಹೊತ್ತ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಬುಧವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ 10 ಕಡೆ ಹಾಗೂ ಬಾಗಲಕೋಟೆ, ವಿಜಯಪುರ ಜಿಲ್ಲೆಯ ಹಲವು ಭಾಗಗಳಲ್ಲಿ ದಾಳಿ
ನಡೆಸಿದ್ದಾರೆ.

ಬೆಂಗಳೂರಿನ ಕೆ.ಆರ್ ಪುರಂ ತಹಶೀಲ್ದಾರ್ ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿಗಳಿಕೆಯ ಆರೋಪದ ಮೇಲೆ ಒಟ್ಟು 10 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

20ಕ್ಕೂ ಹೆಚ್ಚು ಅಧಿಕಾರಿಗಳು ಈ ದಾಳಿಯಲ್ಲಿ ಪಾಲ್ಗೊಂಡು ಮಹತ್ವದ ದಾಖಲೆಗಳು, ಹಣ ಹಾಗೂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಹಿಂದೆ ಅಜಿತ್ ರೈ ಅಮಾನತು ಆಗಿದ್ದರು. ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದ ಬಿಲ್ಡರ್ ಹಾಗೂ ಕಂಪನಿಗಳಿಗೆ ಸಹಕಾರ ನೀಡಿದ್ದ ಅರೋಪದಲ್ಲಿ ಸರ್ಕಾರದ ಅಮಾನತು ಮಾಡಿತ್ತು.ಬಿಜೆಪಿ ಎಲ್ಲಾ ಹಗರಣಗಳ ತನಿಖೆ

ಬಾಗಲಕೋಟೆಯಲ್ಲಿ ಇಬ್ಬರು ಕೃಷಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಲಾಗಿದೆ. ಬಾಗಲಕೋಟೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಹಾಗೂ ಮತ್ತೋರ್ವ ಕೃಷಿ ಅಧಿಕಾರಿ ಕೃಷ್ಣ ಶಿರೂರ (ಅಸಿಸ್ಟೆಂಟ್ ಡೈರೆಕ್ಟರ್) ಮನೆ ಮೇಲೂ ದಾಳಿಯಾಗಿದೆ. ನಗರದ ವಿದ್ಯಾಗಿರಿಯಲ್ಲಿ ಇಬ್ಬರ ನಿವಾಸಗಳು ಇವೆ.

Share This Article
Leave a comment