ಬೆಂಗಳೂರು:
ಭ್ರಷ್ಟಾಚಾರ ಆರೋಪದ ಹಿನ್ನಲೆಯಲ್ಲಿ, ಸರ್ವೇ ಸೂಪರ್ ವೈಸರ್ ಗೆ ಸೇರಿದಂತೆ ನಿವಾಸ, ಕಚೇರಿಯ ಮೇಲೆ ಬೆಂಗಳೂರು, ತುಮಕೂರಿನ 14 ಕಡೆಯಲ್ಲಿ ಮಂಗಳವಾರ ಏಕಕಾಲಕ್ಕೆ ಲೋಕಾಯುಕ್ತ ದಾಳಿ ನಡೆದಿದೆ
ಬೆಂಗಳೂರಿನ ಕೆ ಆರ್ ಪುರಂ ತಾಲೂಕು ಕಚೇರಿಯ ಸರ್ವೇ ಸೂಪರ್ ವೈಸರ್ ಕೆ.ಟಿ ಶ್ರೀನಿವಾಸ್ ಮನೆ, ಕಚೇರಿ, ಸಂಬಂಧಿಕರ ಮನೆ ಮೇಲೆ 14 ಕಡೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಕೆ ಆರ್ ಪುರಂ ತಾಲೂಕು ಕಚೇರಿಯಲ್ಲಿ ಸರ್ವೇ ಸೂಪರ್ ವೈಸರ್ ಆಗಿರುವಂತ ಕೆ.ಟಿ ಶ್ರೀನಿವಾಸ್ ಅವರು ಐದಕ್ಕೂ ಹೆಚ್ಚು ಅಬಕಾರಿ ಲೈಸೆನ್ಸ್ ಹೊಂದಿದ್ದಾರೆ ಎಂಬುದಾಗಿ ಆರೋಪ ಕೇಳಿ ಬಂದಿತ್ತು.
ಬೆಂಗಳೂರಿನ ಅವರ ಕಚೇರಿ, ಆಂಧ್ರಹಳ್ಳಿ ನಿವಾಸ, ಹೆಣ್ಣೂರಿನಲ್ಲಿನ ಸಹೋದರಿ ನಿವಾಸ, ಪತ್ನಿ ಹೆಸರಿನ ಹೋಟೆಲ್ ಬೋರ್ಡಿಂಗ್ ಹೌಸ್, ಶ್ರೀನಿವಾಸ್ ಸಹೋದರನ ಮನೆಯಲ್ಲೂ ಪರಿಶೀಲನೆ ನಡೆಸುತ್ತಿದ್ದಾರೆ.
ಹೆಚ್ಚು ಆಸ್ತಿ ಗಳಿಸಿರುವ ಸರ್ವೆ ಸೂಪರ್ ವೈಸರ್ ಕೆ.ಟಿ ಶ್ರೀನಿವಾಸ್ ನಿವಾಸ, ಕಚೇರಿ, ಸಂಬಂಧಿಕರ ಮೇಲೆ ಬೆಂಗಳೂರು, ತುಮಕೂರು ಸೇರಿದಂತೆ 14 ಕಡೆಯಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು