ರಾಜ್ಯದಲ್ಲಿ ಬೆಳ್ಳಂಬೆಳಿಗ್ಗೆ 19 ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ‘ಲೋಕಾ’ ಮೆಗಾ ದಾಳಿ

Team Newsnap
2 Min Read

ಬೆಂಗಳೂರು :
ಬೆಂಗಳೂರು ಸೇರಿ ರಾಜ್ಯದ 19 ಅಧಿಕಾರಿಗಳ ಮನೆ ಕಚೇರಿಗಳ ಮೇಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ 90 ಸ್ಥಳಗಳಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕಾರ್ಮಿಕ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್ ಮನೆ ಮೇಲೆ ದಾಳಿಯಾಗಿದೆ. ಬೆಂಗಳೂರು ಹಾಗೂ ಕೊಳ್ಳೆಗಾಲದಲ್ಲಿರುವ ಮನೆ ಮೇಲೆ ದಾಳಿ ನಡೆಸಿ.. ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಅಸಿಸ್ಟೆಂಟ್ ರೆವಿನ್ಯೂ ಆಫೀಸರ್ ಚಂದ್ರಪ್ಪ ಬೀರಜ್ಜನವರ್ ಮನೆ ಮೇಲೂ ದಾಳಿಯಾಗಿದೆ. ಬಿಬಿಎಂಪಿಯ ಹೆಗ್ಗನಹಳ್ಳಿ ವಾರ್ಡ್, ಆರ್ ಆರ್ ನಗರ ವಲಯದ ಅಧಿಕಾರಿಗೆ ಸೇರಿರುವ ಕೆ.ಆರ್ ಪುರದ ನಿವಾಸದ ಮೇಲೆ ದಾಳಿ ನಡೆಸಿ ಶೋಧಕಾರ್ಯ ನಡೆಸುತ್ತಿದ್ದಾರೆ. ಚಂದ್ರಪ್ಪಗೆ ಸೇರಿದ ಮೂರು ಕಡೆಗಳಲ್ಲಿ ಲೋಕಾಯುಕ್ತರು ಶೋಧ ನಡೆಸುತ್ತಿದ್ದಾರೆ.

ಆರ್ ಆರ್ ನಗರ ಬಿಬಿಎಂಪಿ ಎಆರ್ ಓ ಮನೆ ಮೇಲೆ ದಾಳಿಯಾಗಿದೆ. ಕೆ.ಆರ್.ಪುರದಲ್ಲಿರುವ ಎಆರ್ ಓ ಸೇರಿ ಒಟ್ಟು ಮೂರು ಕಡೆ ದಾಳಿ ಮಾಡಿದ್ದಾರೆ.

ಬೇರೆ ಜಿಲ್ಲೆಗಳಲ್ಲಿ ಏಲ್ಲೆಲ್ಲಿ ದಾಳಿ:

ಚಿತ್ರದುರ್ಗದ ಇಬ್ಬರು ಅಧಿಕಾರಿಗಳ ಮನೆಯ‌ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಮನೆಯ‌ ಮೇಲೆ ದಾಳಿಯಾಗಿದೆ. ಹಿರಿಯೂರು ಪಟ್ಟಧ ಚಂದ್ರಾಲೇಔಟ್ ನಲ್ಲಿರುವ ಮನೆ, ತವಂದಿ ಗ್ರಾಮದ ಫಾರಂ ಹೌಸ್ ಮೇಲೂ ದಾಳಿ ಪರಿಶೀಲನೆ ನಡೆಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕೃಷ್ಣಮೂರ್ತಿ ನಿವಾಸದ ಮೇಲೂ ದಾಳಿಯಾಗಿದೆ. ಹಿರಿಯೂರು ಪಟ್ಟಣದ ಕುವೆಂಪು ನಗರದಲ್ಲಿರುವ ಮನೆ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಶೋಧಕಾರ್ಯ ನಡೆಸಿದ್ದಾರೆ.

ಹಾಸನದ ಕೆಪಿಟಿಸಿಎಲ್ ಜೂನಿಯರ್ ಇಂಜಿನಿಯರ್ ಮನೆ ದಾಳಿ ನಡೆಸಿದ್ದಾರೆ. ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿರುವ ನಾರಾಯಣ ನಿವಾಸ ಹಾಗೂ ಗೊರೂರಿನಲ್ಲಿರುವ ಕಚೇರಿ ಮೇಲೆ ದಾಳಿಯಾಗಿದೆ. ಲೋಕಾಯುಕ್ತ ಎಸ್‌ಪಿ ಮಲ್ಲಿಕ್, ಡಿವೈಎಸ್‌ಪಿ ತಿರುಮಲೇಶ್, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾ ಬಾಲು, ಶಿಲ್ಪಾ ನೇತೃತ್ವದಲ್ಲಿ ದಾಳಿಯಾಗಿದೆ.

ರಾಯಚೂರಿನ ನಿರ್ಮಿತಿ ಕೇಂದ್ರ, ಕ್ಯಾಷೋಟೆಕ್ ಯೋಜನಾ ನಿರ್ದೇಶಕನ ಮನೆ ಮೇಲೆ ದಾಳಿಯಾಗಿದೆ. ಶರಣಬಸವ ಪಟ್ಟೇದ್ ದಾಳಿಗೊಳಗಾದ ಅಧಿಕಾರಿ. ರಾಯಚೂರು ಲೋಕಾಯುಕ್ತ ಎಸ್ಪಿ ಡಾ. ರಾಮ್. ಎಲ್‌. ಅರಸಿದ್ದಿ ನೇತೃತ್ವದಲ್ಲಿ ದಾಳಿಯಾಗಿದೆ.


ಕಲಬುರಗಿಯಲ್ಲಿ ಎರಡು ಕಡೆ ಲೋಕಾಯುಕ್ತ ದಾಳಿಯಾಗಿದೆ. ಬೀದರ್ ವಲಯ ಅರಣ್ಯಾಧಿಕಾರಿ ಬಸವರಾಜ್ ಡಾಂಗೆ ಹಾಗೂ ದೇವದುರ್ಗದ KBJNL ಇಇ ತಿಪ್ಪಣ್ಣ ಅನ್ನದಾನಿ ಮನೆ ಮೇಲೂ ದಾಳಿಯಾಗಿದೆ. ಅದೇ ರೀತಿ ಬೆಳಗಾವಿ ನಗರದ ನಾಲ್ಕು ಕಡೆಗಳಲ್ಲಿ ಲೋಕಾಯುಕ್ತ ದಾಳಿಯಾಗಿದೆ. ಈ ದಾಳಿ ಕುರಿತಂತೆ ಮತ್ತಷ್ಟು ಮಾಹಿತಿ ಬರಬೇಕಾಗಿದೆ.

Share This Article
Leave a comment