December 23, 2024

Newsnap Kannada

The World at your finger tips!

revenue , lokayukta , Karnataka

2 ಲಕ್ಷ ರು ಲಂಚ ಪಡೆಯುವ ವೇಳೆ ಕಿತ್ತೂರು ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ; 10 ಲಕ್ಷ ನಗದು ಜಪ್ತಿ

Spread the love

ಜಮೀನು ಖಾತೆ ಬದಲಾವಣೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಿತ್ತೂರು ತಹಶೀಲ್ದಾರ್ ಮತ್ತು ಗುಮಾಸ್ತ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.

ವ್ಯಕ್ತಿಯೋರ್ವರಿಂದ 2 ಲಕ್ಷ ರು ಸ್ವೀಕರಿಸುವಾಗಲೇ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.ನಟಿ ವಿನಯಾ ಪ್ರಸಾದ್ ಮನೆಯಲ್ಲಿ ದರೋಡೆ : ಇಬ್ಬರು ಖದೀಮರ ಬಂಧನ

ಬೆಳಗಾವಿ ಜಿಲ್ಲೆಯ ಕಿತ್ತೂರು ತಹಶೀಲ್ದಾರ್ ಸೋಮಲಿಂಗಪ್ಪ ಹಲಗಿ ಹಾಗೂ ಗುಮಾಸ್ತ ಪ್ರಸನ್ನ ಜಿ ಲೋಕಾಯುಕ್ತ ಬಲೆಗೆ ಬಿದ್ದವರು.

ಕಿತ್ತೂರು ತಾಲೂಕಿನ ಖೊದಾನಪೂರ ಗ್ರಾಮದ ಬಾಪುಸಾಹೇಬ ಎಂಬುವವರು ತಮ್ಮ 10 ಎಕರೆ ಜಮೀನಿನ ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಕಿತ್ತೂರು ತಹಶೀಲ್ದಾರ್ 5 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು.ಈ ಬಗ್ಗೆ ಬಾಪುಸಾಹೇಬ್ ಪುತ್ರ ರಾಜೇಂದ್ರ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.ಅಂತೆಯೇ ತಹಶೀಲ್ದಾರ್ ಮತ್ತು ಗುಮಾಸ್ತ 2 ಲಕ್ಷ ರೂ. ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!