ಬೆಂಗಳೂರು : ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿ ಬೆಂಗಳೂರು (Bengaluru), ಮಂಡ್ಯ, ರಾಮನಗರ, ಬಳ್ಳಾರಿ ಸೇರಿದಂತೆ 30 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿದ್ದಾರೆ.
ರಾಜ್ಯಾದ್ಯಂತ ಬೆಂಗಳೂರು ನಗರದಲ್ಲಿ 10 ಕಡೆ, ಬಳ್ಳಾರಿಯಲ್ಲಿ 7 ಕಡೆ ಸೇರಿದಂತೆ ಏಕಕಾಲಕ್ಕೆ 30 ಕಡೆ ದಾಳಿ ನಡೆಸಿದ್ದಾರೆ.
ಬಿಎಂಪಿ ಅಧಿಕಾರಿಗಳು (BBMP Officials) ಸೇರಿದಂತೆ ಇತರ ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
ಬೆಸ್ಕಾಂ (BESCOM) ಕಚೇರಿಯಲ್ಲಿ ಚೀಫ್ ಜನರಲ್ ಮ್ಯಾನೇಜರ್ ಆಗಿದ್ದ ಎಂ.ಎಲ್ ನಾಗರಾಜ್ ಮನೆ, ಕಚೇರಿಗಳ ಮೇಲೂ ದಾಳಿ ನಡೆದಿದೆ. ಈ ಹಿಂದೆ ನಾಗರಾಜ್ ಪರವಾಗಿ ಡ್ರೈವರ್ ಮುರಳಿಕೃಷ್ಣ 7 ಲಕ್ಷ ರೂ. ಪಡೆದಿದ್ದ, ಹಣ ಪಡೆಯುವಾಗಲೇ ಸಿಕ್ಕಿಬಿದ್ದಿದ್ದರಿಂದ ನಾಗರಾಜ್ ಅವರನ್ನ ಒಂದೂವರೆ ತಿಂಗಳಿನಿಂದ ಅಮಾನತ್ತಿನಲ್ಲಿಡಲಾಗಿತ್ತು ಎಂದು ತಿಳಿದುಬಂದಿದೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಲೋಕಾಯುಕ್ತ ಅಧಿಕಾರಿಗಳು ನಾಗರಾಜ್‌ಗೆ ಸೇರಿದ ಬಳ್ಳಾರಿಯ 7 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ನಾಗರಾಜ್ ಹೆಸರಲ್ಲಿ 9 ಸೈಟ್‌ಗಳು, 3 ಮನೆಗಳು, 3 ಪೆಟ್ರೋಲ್ ಬಂಕ್, ಕೃಷಿ ಜಮೀನು, ಶಿಕ್ಷಣ ಸಂಸ್ಥೆಗಳ ದಾಖಲೆಗಳು ದೊರಕಿದ್ದು ಕಾರ್ಯಚರಣೆ ಮುಂದುವರೆಸಲಾಗಿದೆ .
More Stories
ನವೆಂಬರ್ 11ರಿಂದ ಉಪ ಚುನಾವಣಾ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ನಿಷೇಧ
ಮಂಡ್ಯ : ಹಿಂದೂ ಸ್ಮಶಾನವನ್ನು ವಕ್ಫ್ ಆಸ್ತಿಯೆಂದು ಘೋಷಿಸಿದ ಪ್ರಕರಣ
MUDA ಹಗರಣ: ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ