ಮೈಸೂರು : ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್ ನೀಡಿದೆ.
ಮುಡಾ ಸೂಪರಿಂಟೆಂಡೆಂಟ್ ಇಂಜಿನಿಯರ್ ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ನಿವೇಶನ ಹಂಚಿಕೆ ಆರೋಪಕ್ಕೆ ಸಂಬಂಧಿಸಿ ಆರ್ಟಿಐ ಕಾರ್ಯಕರ್ತ ಗಂಗರಾಜು 2017ರಲ್ಲಿ ದೂರು ನೀಡಿದ್ದು ,ಈ ಸಂಬಂಧ 2022ರಲ್ಲಿ ಸರ್ಕಾರದ ಅನುಮತಿ ಪಡೆದು ಮೈಸೂರು ಲೋಕಾಯುಕ್ತ ಪ್ರಕರಣ ದಾಖಲಿಸಿಕೊಂಡಿತ್ತು.
ಮೈಸೂರು ತಾಲ್ಲೂಕು ಹಿನಕಲ್ ಗ್ರಾಮ ಸರ್ವೆ ನಂ.89ರಲ್ಲಿ 7 ಎಕರೆ 18 ಗುಂಟೆ ಜಮೀನನ್ನು ಹಿನಕಲ್ ಮಂಡಲ ಪಂಚಾಯ್ತಿಯವರು ಆಶ್ರಯ ಯೋಜನೆಯಡಿಯಲ್ಲಿ ಅನಧಿಕೃತ ಬಡಾವಣೆ ನಿರ್ಮಿಸಿ / ಉಳ್ಳವರಿಗೆ ರಾಜಕೀಯ ವ್ಯಕ್ತಿಗಳಿಗೆ ಹಂಚಿಕೆ ಮಾಡಿ ವಂಚಿಸಿದ ಬಗ್ಗೆ ದಿನಾಂಕ 01.04.2017 ರಂದು ದೂರು ನೀಡಿದ್ದು , ಇದು ದೃಢಪಟ್ಟಿರುವುದರಿಂದ ಸಂಬಂಧಪಟ್ಟವರ ವಿರುದ್ಧ ಕ್ರಮಕ್ಕಾಗಿ ಮನವಿ ಸಲ್ಲಿಸುತ್ತಿದ್ದೇನೆ ಎಂದು 2017ರಲ್ಲಿ ಆರ್ಟಿಐ ಕಾರ್ಯಕರ್ತ ಗಂಗರಾಜು ಭ್ರಷ್ಟಾಚಾರ ನಿಗ್ರಹ ದಳದ ಮೈಸೂರು ಜಿಲ್ಲಾ ವ್ಯಾಪ್ತಿಯ ಪೊಲೀಸ್ ವರಿಷ್ಠಾಧಿಕಾರಿಗಳಿಗೂ ಪತ್ರ ಬರೆದಿದ್ದಾರೆ.
ಸರ್ವೆ ನಂ.89ರಲ್ಲಿ 7 ಎಕರೆ 18 ಗುಂಟೆ ಮುಡಾ ಪ್ರಾಧಿಕಾರದ ಸ್ವತ್ತಿನಲ್ಲಿ ಅಕ್ರಮವಾಗಿ ಮುಡಾ ಅನುಮತಿಯನ್ನು ಪಡೆಯದೇ ಬಡಾವಣೆಯನ್ನು ನಿರ್ಮಿಸಿ ಆಶ್ರಯ ಯೋಜನೆ ಫಲಾನುಭವಿಗಳಿಗೆ ಹಂಚಿಕೆ ಮಾಡುತ್ತೇವೆಂದು ಸದರಿ ಹಿನಕಲ್ ಮಂಡಲ ಪಂಚಾಯ್ತಿಯ ಅಧ್ಯಕ್ಷರು, ಕಾರ್ಯದರ್ಶಿಗಳು (ಪ್ರಧಾನರು) 1990-92ನೇ ಅವಧಿಯಲ್ಲಿ ಇದ್ದಂತಹ ಪಂಚಾಯ್ತಿಯ ಸರ್ವಸದಸ್ಯರುಗಳು ಹಾಗೂ ಈ ಮೇಲ್ಕಂಡ ವಿಷಯಕ್ಕೆ ಸಂಬಂಧಪಟ್ಟಂತೆ ನಿರ್ಧಾರ ತೆಗೆದುಕೊಳ್ಳುವ ಸಮಯದಲ್ಲಿ ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಸಹಕರಿಸಿದ ಎಲ್ಲಾ ಅಧಿಕಾರಿವರ್ಗದವರ ವಿರುದ್ದ ಕ್ರಮ ತೆಗೆದುಕೊಳ್ಳಲು ತಮ್ಮ ಕಛೇರಿಗೆ ಮನವಿ ಸಲ್ಲಿಸಿದ್ದಾರೆ.ಮಾಧ್ಯಮಗಳ ಮೇಲೆ ನಿಷೇಧ ಹೇರುವಂತೆ ನಟ ದರ್ಶನ್ ಕೋರಿಕೆ
ಗಂಗರಾಜು ಪತ್ರದಲ್ಲಿ ಕರ್ತವ್ಯ ಲೋಪ ಎಸಗಿರುವ ಎಲ್ಲಾ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ ಎಂದು ಉಲ್ಲೇಖಿಸಿದ್ದಾರೆ.
More Stories
ಮೈಸೂರಿನಲ್ಲಿ ಚಲಿಸುತ್ತಿದ್ದ KSRTC ಬಸ್ಗೆ ಬೆಂಕಿ: 50 ಕ್ಕೂ ಹೆಚ್ಚು ಪ್ರಯಾಣಿಕರು ರಕ್ಷಣೆ
ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
ವಿಧಾನ ಪರಿಷತ್ ಸಚಿವಾಲಯದಲ್ಲಿ ನೇಮಕಾತಿ: ಹುದ್ದೆಗಳ ವಿವರ, ವೇತನ ಮತ್ತು ಅರ್ಜಿ ದಿನಾಂಕ