ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತ : ಲೋಕಾಯುಕ್ತ ಅಧಿಕಾರಿ ಸಾವು

Team Newsnap
1 Min Read

ಲೋಕಾಯುಕ್ತ ಡಿವೈಎಸ್ಪಿ ಬ್ಯಾಡ್ಮಿಂಟನ್ ಆಡುವ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ ನಡೆದಿದೆ.

ಜಿಲ್ಲಾ ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸುತ್ತಿದ್ದ ಅರುಣ್ ನಾಯಕ್ ಮೃತಪಟ್ಟ ಅಧಿಕಾರಿಯಾಗಿದ್ದಾರೆ.

ಬುಧವಾರ ಸಂಜೆ ವಿಜಯಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ ವೇಳೆ ಅರುಣ್ ನಾಯಕ್ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ತಡರಾತ್ರಿ ಸಾವಿಗೀಡಾಗಿದ್ದಾರೆ. ರಾಜ್ಯ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಪ್ರಯಾಣಿಕರಿಗೆ ಪುಣ್ಯ ಕ್ಷೇತ್ರಗಳ ಟೂರ್ ಪ್ಯಾಕೇಜ್

ಅವರಿಗೆ ಪತ್ನಿ ಹಾಗೂ ಓರ್ವ ಪುತ್ರ ಇದ್ದು, ಪುತ್ರ ಬೆಂಗಳೂರಿನಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.  ಮಗನೊಂದಿಗೆ ಬೆಂಗಳೂರಿನಲ್ಲೇ ಅರುಣ್ ನಾಯಕ್ ಪತ್ನಿ ವಾಸವಿದ್ದರು.

ವಿಚಾರ ತಿಳಿಯುತ್ತಿದ್ದಂತೆ ಪತ್ನಿ ಹಾಗೂ ಪುತ್ರ ವಿಜಯಪುರಕ್ಕೆ ಆಗಮಿಸಿದ್ದಾರೆ.ಲೋಕಾಯುಕ್ತ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಆಸ್ಪತ್ರೆಗೆ ತೆರಳಿ ಮೃತರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

Share This Article
Leave a comment