ಈ ಪ್ರಕರಣದಲ್ಲಿ ಪುತ್ರ ಹಾಗೂ ಶಾಸಕರ ವಿರುದ್ಧ ದೂರು ದಾಖಲಾಗಿತ್ತು.
ಬಂಧನದ ಭೀತಿಯಲ್ಲಿದ್ದಂತಹ ಶಾಸಕರು ನಿರೀಕ್ಷಣಾ ಜಾಮೀನು ಪಡೆದಿದ್ದರು. ಇಂದು ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ, ಲೋಕಾಯುಕ್ತ ಪೊಲೀಸರಿಂದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲಾಗಿದೆ.
ಲೋಕಾಯುಕ್ತ ಕೇಸ್ ನಲ್ಲಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರು.
ನಿರೀಕ್ಷಣಾ ಜಾಮೀನು ನೀಡಿದ್ದಂತ ಹೈಕೋರ್ಟ್ ನಡೆಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರಬರೆದು ಬೆಂಗಳೂರು ವಕೀಲರ ಸಂಘವು ಆಘಾತ ವ್ಯಕ್ತ ಪಡಿಸಿತ್ತು.
ಇಂದು ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಅವಧಿ ಕೊನೆಗೊಂಡಿದ್ದ ಕಾರಣ ಮತ್ತೆ ಜಾಮೀನು ಮುಂದುವರೆಸಲು ಮನವಿ ಮಾಡಲಾಗಿತ್ತು. ಆದರೆ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠವು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದರು.
ಚೆನ್ನಗಿರಿಯಿಂದಲೇ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಅರಿತ ಲೋಕಾಯುಕ್ತ ಪೊಲೀಸರು ಮಾರ್ಗ ಮಧ್ಯೆ ಅವರನ್ನು ಪ್ರಕರಣ ಸಂಬಂಧ ಬಂಧಿಸಿದ್ದಾರೆ.ಇದನ್ನು ಓದಿ –ಒಳ ಮೀಸಲಾತಿಗೆ ಧಿಕ್ಕರಿಸಿದ ಬಂಜಾರ ಸಮುದಾಯ; ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು