June 5, 2023

Newsnap Kannada

The World at your finger tips!

Raid , Lokayukta , MLA

MLA Madal Virupakshappa to Lokayukta custody for 5 days ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೋಲಿಸರು

Spread the love

ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಂತ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯುಕ್ತ ಬಲೆಗೆ ಬಿದ್ದ ಲೋಕಾಯುಕ್ತ ಸಿಕ್ಕಿಬಿದ್ದ ಬೆನ್ನಲ್ಲಿ ಈಗ ಬಿಜೆಪಿ ಶಾಸಕನನ್ನು ಬಂಧಿಸಲಾಗಿದೆ.

ಈ ಪ್ರಕರಣದಲ್ಲಿ ಪುತ್ರ ಹಾಗೂ ಶಾಸಕರ ವಿರುದ್ಧ ದೂರು ದಾಖಲಾಗಿತ್ತು.

ಬಂಧನದ ಭೀತಿಯಲ್ಲಿದ್ದಂತಹ ಶಾಸಕರು ನಿರೀಕ್ಷಣಾ ಜಾಮೀನು ಪಡೆದಿದ್ದರು. ಇಂದು ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ, ಲೋಕಾಯುಕ್ತ ಪೊಲೀಸರಿಂದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲಾಗಿದೆ.

ಲೋಕಾಯುಕ್ತ ಕೇಸ್ ನಲ್ಲಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರು.

ನಿರೀಕ್ಷಣಾ ಜಾಮೀನು ನೀಡಿದ್ದಂತ ಹೈಕೋರ್ಟ್ ನಡೆಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರಬರೆದು ಬೆಂಗಳೂರು ವಕೀಲರ ಸಂಘವು ಆಘಾತ ವ್ಯಕ್ತ ಪಡಿಸಿತ್ತು.

ಇಂದು ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಅವಧಿ ಕೊನೆಗೊಂಡಿದ್ದ ಕಾರಣ ಮತ್ತೆ ಜಾಮೀನು ಮುಂದುವರೆಸಲು ಮನವಿ ಮಾಡಲಾಗಿತ್ತು. ಆದರೆ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠವು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದರು.

ಚೆನ್ನಗಿರಿಯಿಂದಲೇ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ಅರಿತ ಲೋಕಾಯುಕ್ತ ಪೊಲೀಸರು ಮಾರ್ಗ ಮಧ್ಯೆ ಅವರನ್ನು ಪ್ರಕರಣ ಸಂಬಂಧ ಬಂಧಿಸಿದ್ದಾರೆ.ಇದನ್ನು ಓದಿ –ಒಳ ಮೀಸಲಾತಿಗೆ ಧಿಕ್ಕರಿಸಿದ ಬಂಜಾರ ಸಮುದಾಯ; ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ

error: Content is protected !!