ಬೆಂಗಳೂರು ನಗರದಲ್ಲಿ, ಜಿಆರ್‌ಪಿಎ ಮುಖ್ಯ ಇಂಜಿನಿಯರ್ ನಂಜುಂಡಪ್ಪ ಹಾಗೂ ಬಿಬಿಎಂಪಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಹೆಚ್.ಪಿ. ಕಲ್ಲೇಶಪ್ಪ ಅವರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಕೋಲಾರದಲ್ಲಿ, ಬೆಸ್ಕಾಂ AEE ಜಿ. ನಾಗರಾಜ್ ಅವರ ಮನೆ ಹಾಗೂ ಸಂಬಂಧಪಟ್ಟ ಮೂರು ಸ್ಥಳಗಳಲ್ಲಿ ಪರಿಶೀಲನೆ ನಡೆಯುತ್ತಿದೆ. ಅವರು ಬೆಂಗಳೂರು ರಾಜಾಜಿನಗರದಲ್ಲಿ ಹಾಲಿ AEE ಆಗಿ ಸೇವೆ ಸಲ್ಲಿಸುತ್ತಿದ್ದು, ಅವರ ಸಂಬಂಧಿಕರ ಮನೆಯ ಮೇಲೂ ದಾಳಿ ನಡೆದಿದೆ. ದಾಳಿಯ ವೇಳೆ ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಕೊಳ್ಳೇಗಾಲದ ಬಳಿ 6 ಎಕರೆ ಜಮೀನು, ಬೆಂಗಳೂರಿನಲ್ಲಿ ಒಂದು ಮನೆ ಹಾಗೂ ಎರಡು ನಿವೇಶನಗಳು ಅವರ ಹೆಸರಿನಲ್ಲಿ ದಾಖಲಾಗಿರುವುದಾಗಿ ತಿಳಿದುಬಂದಿದೆ.
ದಾವಣಗೆರೆ ಜಿಲ್ಲೆಯ ಫುಡ್ ಸೇಫ್ಟಿ & ಕ್ವಾಲಿಟಿ ಯುನಿಟ್ ಹೆಲ್ತ್ ಡಿಪಾರ್ಟ್ಮೆಂಟ್‌ನ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗರಾಜ್ ಅವರ ನಿವಾಸದ ಮೇಲೂ ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ದಾಳಿ ನಡೆದಿದೆ.
ತುಮಕೂರಿನ ಸರ್ಕಾರಿ ಆಸ್ಪತ್ರೆ ವೈದ್ಯ ಡಾ. ಜಗದೀಶ್ ಅವರ ಮನೆ ಮೇಲೆ ಕೂಡ ‘ಲೋಕಾ’ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲೆಯಲ್ಲಿ ಬೀಳಗಿ ಲೋಕೋಪಯೋಗಿ ಇಲಾಖೆ ಎಫ್‌ಡಿಸಿ ಮಲ್ಲೇಶ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಲಾಗಿದೆ.ಇದನ್ನು ಓದಿ –ಒಂದು ವರ್ಷದ ಒಳಗೆ ಮುಜರಾಯಿ ದೇವಾಲಯಗಳ ಆಸ್ತಿ ಇಂಡೀಕರಣ: ಸಚಿವ ರಾಮಲಿಂಗಾರೆಡ್ಡಿ
ಕಲಬುರಗಿಯಲ್ಲಿ, ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕೋಪಯೋಗಿ ಮುಖ್ಯ ಇಂಜಿನಿಯರ್ ಅವರ ಮನೆ ಮೇಲೆ ದಾಳಿ ನಡೆದಿದೆ. ಎನ್‌ಜಿಓ ಕಾಲೋನಿಯಲ್ಲಿರುವ ಅವರ ಮನೆಯನ್ನು ಒಳಗೊಂಡು ಒಟ್ಟು 6 ಕಡೆ ಶೋಧ ಕಾರ್ಯ ನಡೆಯುತ್ತಿದೆ.
ಈ ದಾಳಿ ಪ್ರಕ್ರಿಯೆ ಭ್ರಷ್ಟ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಾದ ಕ್ರಮದ ಭಾಗವಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು