ಮಂಡ್ಯ: ಮಂಡ್ಯದ ಮಿಮ್ಸ್‌ನ ಔಷಧಿ ಉಗ್ರಾಣದಲ್ಲಿ 40 ಲಕ್ಷ ಮೌಲ್ಯದ ಅವಧಿ ಮುಗಿದಿರುವ ರೆಮ್ಡಿಸಿವರ್ ಮೆಡಿಸನ್ ಕಂಡುಬಂದಿದೆ.
ಕೇಶವಮೂರ್ತಿ ಎಂಬವರು ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಅವಧಿಗೆ ಮೀರಿನ ಲಕ್ಷಾಂತರ ರೂಪಾಯಿಯ ಮೆಡಿಸಿನ್ ಇದ್ದು, ಅಧಿಕಾರಿಗಳು ಏಜೆನ್ಸಿಯವರೊಂದಿಗೆ ಮೆಡಿಕಲ್ ಮಾಫಿಯಾದಲ್ಲಿ ಭಾಗಿಯಾಗಿ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಮಾಡುತ್ತಿದ್ದಾರೆ ಎಂದು ದೂರು ನೀಡಿದ್ದಾರೆ.
ದೂರಿನ ಅನ್ವಯ ಮಿಮ್ಸ್‌ನ ಔಷಧಿ ಉಗ್ರಾಣದ ಮೇಲೆ ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.
ದಾಳಿಯ ವೇಳೆ ಪ್ರಮುಖವಾಗಿ ಕೊರೊನಾ ಕಾಲದಲ್ಲಿ ಬಹು ಬೇಡಿಕೆ ಇದ್ದ ರೆಮ್ಡಿಸಿವರ್ ಇಂಜೆಕ್ಷನ್ ಎಕ್ಸ್ಪೆರಿಯಾಗಿರುವುದು ಕಂಡುಬಂದಿದ್ದು ,ಬರೋಬ್ಬರಿ 40 ಲಕ್ಷ ಮೌಲ್ಯದ ರೆಮ್ಡಿಸಿವರ್ ಇಂಜೆಕ್ಷನ್ ಅವಧಿ 2022ರಲ್ಲಿಯೇ ಮುಕ್ತಾಯವಾಗಿದೆ.
ಕೇವಲ ರೆಮ್ಡಿಸಿವರ್ ಮಾತ್ರವಲ್ಲ ಬೇರೆ ಬೇರೆ ರೋಗಗಳಿಗೆ ನೀಡುವ ಔಷಧಿ, ಮಾತ್ರೆ, ಇಂಜೆಕ್ಷನ್‌ನ ಅವಧಿಯೂ ಮುಕ್ತಾಯವಾಗಿದ್ದು ,ಲಕ್ಷಾಂತರ ರೂಪಾಯಿ ನಷ್ಟ ಸರ್ಕಾರಕ್ಕೆ ಉಂಟಾಗಿದೆ.
ಮಂಡ್ಯದ ಮಿಮ್ಸ್ ಸೇರಿದಂತೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಒಂದಷ್ಟು ಮೆಡಿಸಿನ್ ಏಜೆನ್ಸಿಗಳು ಔಷಧಿ, ಇಂಜೆಕ್ಷನ್, ಮಾತ್ರೆಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ಸರಬರಾಜು ಮಾಡುತ್ತವೆ. ಈ ಸರಬರಾಜು ಆದ ಮೆಡಿಸಿನ್‌ಗಳ ಅವಧಿ ಮುಕ್ತಾಯದ ಎರಡು ಅಥವಾ ಮೂರು ತಿಂಗಳ ಮುಂಚೆಯೇ ಆಯಾ ಏಜೆನ್ಸಿ ಅವರಿಗೆ ಔಷಧಿ ವಾಪಸ್ಸು ನೀಡಿದರೆ ಅವರು ಹೊಸ ಔಷಧಿ ನೀಡುತ್ತಾರೆ .ಇದರಿಂದ ಯಾವುದೇ ಹಣ ವ್ಯಯವಾಗುವುದಿಲ್ಲ.ಶಿಕ್ಷಕನಿಂದಲೇ 5ನೇ ತರಗತಿ ವಿದ್ಯಾರ್ಥಿನಿಯ ಲೈಂಗಿಕ ದೌರ್ಜನ್ಯ
ಸಂಬಂಧಪಟ್ಟ ಅಧಿಕಾರಿಗಳು ಈ ಕೆಲಸವನ್ನು ಮಾಡದೇ ಏಜೆನ್ಸಿ ಅವರೊಂದಿಗೆ ಒಪ್ಪಂದ ಮಾಡಿಕೊಂಡು ಔಷಧಿಗಳು ಅವಧಿ ಮುಗಿಯುವವರೆಗೆ ತಮ್ಮಲ್ಲೇ ಇಟ್ಟುಕೊಳ್ಳುತ್ತಾರೆ. ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ ಕತ್ತರಿ ಬೀಳುತ್ತದೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ